ಕರ್ನಾಟಕ

karnataka

ETV Bharat / state

ಎಸ್.ಎಂ.ಕೃಷ್ಣ ಭೇಟಿಯಾಗಿ ಆಶೀರ್ವಾದ ಪಡೆದ ಕೈ ಅಭ್ಯರ್ಥಿ ವೆಂಕಟರಮಣೇಗೌಡ - Venkataramane Gowda - VENKATARAMANE GOWDA

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

congress-candidate-venkatarame-gowda-meets-sm-krishna
ಮಾಜಿ ಸಿಎಂ ಎಸ್. ಎಂ ಕೃಷ್ಣರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ

By ETV Bharat Karnataka Team

Published : Apr 2, 2024, 5:31 PM IST

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಸದಾಶಿವ ನಗರದ ನಿವಾಸದಲ್ಲಿಂದು ಭೇಟಿ ಮಾಡಿ ಆಶೀರ್ವಾದ ಪಡೆದರು. ಇದೇ ವೇಳೆ ಎಸ್.ಎಂ.ಕೃಷ್ಣರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ನಂತರ ಉಭಯ ಕುಶಲೋಪರಿ ವಿಚಾರಿಸಿದ ನಾಯಕರು, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಮಾಜಿ ಸಿಎಂ ಎಸ್. ಎಂ ಕೃಷ್ಣರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಗಣಿಗ ರವಿ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕರುಗಳಾದ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಜತೆಗಿದ್ದರು.

ಇದನ್ನೂ ಓದಿ:ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಆಸ್ತಿ ಎಷ್ಟು? - STAR CHANDRU

ABOUT THE AUTHOR

...view details