ಕಾಂಗ್ರೆಸ್ ಬಾವುಟ ಹಾರಿಸಲಿದ್ದೇವೆ ಹುಬ್ಬಳ್ಳಿ :ಪಕ್ಷ ನನ್ನಂತ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ನಿನ್ನೆಯಿಂದ ಪಕ್ಷದ ಎಲ್ಲರ ಅಭಿಪ್ರಾಯ ಪಡೆದುಕೊಂಡು ಪ್ರಚಾರ ಆರಂಭಿಸಿದ್ದೇನೆ. ಪಕ್ಷದ ನಾಯಕರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡೆಯುವ ಮೂಲಕ ಕಾಂಗ್ರೆಸ್ ಬಾವುಟ ಹಾರಿಸಲಿದ್ದೇವೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಹರಕೆ ಕುರಿಯಾಗಲು ಬಹಳ ಜನರಿದ್ದು, ಆ ಹರಕೆ ನೀವಾ? ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿನೋದ್ ಅಸೂಟಿ, ಈ ಬಾರಿ ಕಾರ್ಯಕರ್ತನಿಗೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ ನೀಡಿದೆ. ನೂರಕ್ಕೆ ನೂರು ನಾಯಕರು ಕೊಟ್ಟಂತಹ ಈ ಅವಕಾಶವನ್ನು ಬಳಸಿಕೊಂಡು ಕಾಂಗ್ರೆಸ್ ಬಾವುಟವನ್ನು ಎಲ್ಲರ ಸಮ್ಮುಖದಲ್ಲಿ ಹಾರಿಸುತ್ತೇವೆ ಎಂದರು.
ರಾಜ್ಯದ ಜನತೆಗೆ ನೀಡಿರುವ ಗ್ಯಾರಂಟಿ ಯೋಜನೆಗಳ ವಿಶ್ವಾಸದಿಂದ ಚುನಾವಣೆಗೆ ಮುಂದಾಗಿದ್ದು, ದೇಶಾದ್ಯಂತ ಕಾಂಗ್ರೆಸ್ ಅಲೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳು ಇಲ್ಲ. ಪಕ್ಷ ಒಂದು ಕುಟುಂಬ ಇದ್ದ ಹಾಗೆ, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಹೀಗಾಗಿ ಎಲ್ಲರೂ ಜೊತೆಗೂಡಿ ಚುನಾವಣೆ ಎದುರಿಸಲಿದ್ದೇವೆ ಎಂದು ವಿನೋದ್ ಅಸೂಟಿ ಸ್ಪಷ್ಟಪಡಿಸಿದರು.
ಮೂರು ದಶಕಗಳಿಂದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿಲ್ಲ. ಈ ಬಾರಿ ನಿಮ್ಮ ಮೂಲಕ ಗೆಲುವು ಸಾಧಿಸಬಹುದೆ ಎಂದು ಕೇಳಿದಾಗ, ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕೆನ್ನುವ ಹುಮ್ಮಸ್ಸು ಕಾರ್ಯಕರ್ತರಲ್ಲಿದೆ. ನಾಯಕರ ಒಗ್ಗಟ್ಟಿನ ಬಲ ಮತ್ತು ಅವರ ಆಶೀರ್ವಾದದಿಂದ ನಾವು ಗೆಲ್ಲುತ್ತೇವೆ ಎಂದು ವಿನೋದ್ ಅಸೂಟಿ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ :ಲೋಕಸಮರಕ್ಕೆ ರಾಜ್ಯ ಕಾಂಗ್ರೆಸ್ನಿಂದ ಗ್ಯಾರಂಟಿ ಅಸ್ತ್ರ: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು? - Congress guarantees