ಕರ್ನಾಟಕ

karnataka

ETV Bharat / state

ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನಡೆಯುತ್ತೇವೆ: ಸಿಎಂ ಸಿದ್ದರಾಮಯ್ಯ - CM SIDDARAMAIAH X POST - CM SIDDARAMAIAH X POST

ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

CONGRESS GOVERNMENT  ONE YEAR  BENGALURU
ಸಿಎಂ ಸಿದ್ದರಾಮಯ್ಯ (ಕೃಪೆ: ETV Bharat)

By ETV Bharat Karnataka Team

Published : May 20, 2024, 1:39 PM IST

ಬೆಂಗಳೂರು:ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸರ್ಕಾರ ಒಂದು ವರ್ಷ ಪೂರೈಸಿದ ಸಂಬಂಧ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದ ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು ಎಂದು ಸಿಎಂ ತಿಳಿಸಿದ್ದಾರೆ.

ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ. ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ ಎಂದಿದ್ದಾರೆ.

ಓದಿ:ಬೆಂಗಳೂರು: ಪೆಟ್ರೋಲ್ ಟ್ಯಾಂಕ್ ಮೇಲೆ ಗೆಳತಿಯನ್ನು ಕೂರಿಸಿಕೊಂಡು ಜಾಲಿ ರೈಡ್​, ಯುವಕ ಸೆರೆ - Bike Rider Arrest

ABOUT THE AUTHOR

...view details