ಕರ್ನಾಟಕ

karnataka

By ETV Bharat Karnataka Team

Published : 5 hours ago

ETV Bharat / state

ವಿಧಾನಪರಿಷತ್ ಉಪಚುನಾವಣೆ: ರಾಜು ಪೂಜಾರಿ ಕಾಂಗ್ರೆಸ್ ಅಭ್ಯರ್ಥಿ - MLC By Election

ವಿಧಾನಪರಿಷತ್ ಉಪಚುನಾವಣೆ ಭರದ ಸಿದ್ಧತೆ ನಡೆಸಿರುವ ಕಾಂಗ್ರೆಸ್​, ರಾಜು ಪೂಜಾರಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ
ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ (ETV Bharat)

ಮಂಗಳೂರು: ಅಕ್ಟೋಬರ್ 21 ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದೀಗ ಉಡುಪಿ ಸಂಸದರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.

ಈ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್​ನಿಂದ ಐದು ಮಂದಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕಮಾಂಡ್ ರಾಜು ಪೂಜಾರಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ರಾಜು ಪೂಜಾರಿ ಅವರು ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಎಸ್​ಡಿಸಿಸಿಸಿ ಬ್ಯಾಂಕ್​ನ ನಿರ್ದೇಶಕರು ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ವಿಧಾನಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಪುತ್ತೂರು ಬಿಜೆಪಿ ಅಭ್ಯರ್ಥಿ - Council Election

ಬಿಜೆಪಿ, ಕಿಶೋರ್ ಕುಮಾರ್ ಪುತ್ತೂರು ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಸುಮಾರು 15 ಮಂದಿ ಪ್ರಯತ್ನಿಸಿದ್ದರು. ಆದರೆ, ದ.ಕ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಗಿರುವ ಕಿಶೋರ್ ಕುಮಾರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ. ಈ ಸ್ಥಾನಕ್ಕಾಗಿ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ಅವರು ಮೊದಲ ನಾಮಪತ್ರ ಸಲ್ಲಿಸಿದ್ದಾರೆ.

ರಾಜು ಪೂಜಾರಿ (ETV Bharat)

ದ.ಕ. ಹಾಗೂ ಉಡುಪಿ ಜಿಲ್ಲೆಯ 392 ಸ್ಥಳೀಯಾಡಳಿತಗಳ 6,037 ಮಂದಿ ಮತ ಚಲಾಯಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಅ.3ರವರೆಗೆ ಅವಕಾಶವಿದೆ. ಅ.4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.7ರಂದು ನಾಮಪತ್ರ ವಾಪಸ್‌ಗೆ ಕೊನೆಯ ದಿನ. ಅ.21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ಹಾಗೂ ಅ.24ರಂದು ಮತ ಎಣಿಕೆ ನಡೆಯಲಿದೆ.

ABOUT THE AUTHOR

...view details