ಕರ್ನಾಟಕ

karnataka

ETV Bharat / state

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ ಆರ್ ಪಾಟೀಲ್ ರಾಜೀನಾಮೆ - CONGRESS MLA RESIGN

ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಹುದ್ದೆಗೆ ಅಳಂದ ಶಾಸಕ ಬಿ ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ.

CONGRESS MLA BR PATIL
ಶಾಸಕ ಬಿ ಆರ್ ಪಾಟೀಲ್ (ETV Bharat)

By ETV Bharat Karnataka Team

Published : Feb 1, 2025, 3:33 PM IST

ಬೆಂಗಳೂರು: ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ ಆರ್ ಪಾಟೀಲ್ ರಾಜೀನಾಮೆ‌ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ (ನೀತಿ ಮತ್ತು ಕಾರ್ಯಕ್ರಮ) ಸ್ಥಾನಕ್ಕೆ ಆಳಂದ ಶಾಸಕರಾಗಿರುವ ಬಿ ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಅವರ ಈ ನಡೆ ರಾಜ್ಯ ರಾಜಕೀಯದಲ್ಲಿ ಅಚ್ಚರಿ ಮೂಡಿಸಿದೆ.

ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಸ್ವತಃ ಬಿ ಆರ್ ಪಾಟೀಲ್ ಅವರೇ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಹಿಂದಿರುಗಿಸಿರುವುದಾಗಿಯೂ ಅವರು ತಿಳಿಸಿದ್ದಾರೆ. ಆದರೆ, ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

ಕಳೆದ ವರ್ಷ ಜನವರಿಯಲ್ಲಿ ಬಿ ಆರ್ ಪಾಟೀಲ್​ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರನಾಗಿ ನೇಮಿಸಲಾಗಿತ್ತು. ಕಾಂಗ್ರೆಸ್ ಹಿರಿಯ ಶಾಸಕ ಆಗಿದ್ದು, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸರ್ಕಾರದ ಆಡಳಿತ ವೈಖರಿ ಬಗ್ಗೆ ಬಹಿರಂಗವಾಗಿಯೂ ಅಗಾಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರವನ್ನು ಬರೆದಿದ್ದರು.

ಅಸಮಾಧಾನಿತ ಬಿ ಆರ್ ಪಾಟೀಲ್ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲು ಹೈಕಮಾಂಡ್ ತೀರ್ಮಾನಿಸಿತ್ತು. ಆದರೆ, ಅದನ್ನು ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು. ಇದೀಗ ಅದಕ್ಕೂ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: MLA B R Patil: ಆತ್ಮಗೌರವಕ್ಕೆ ಧಕ್ಕೆಯಾದಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದು ನಿಜ: ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್​ - ಕಾಂಗ್ರೆಸ್ ಶಾಸಕಾಂಗ ಪಕ್ಷ

ABOUT THE AUTHOR

...view details