ಯಾದಗಿರಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಇದಕ್ಕೂ ಮುನ್ನ ವಿಶೇಷ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ ಸಿದ್ದರಾಮಯ್ಯ ಸುರಪುರಕ್ಕೆ ಬಂದಿಳಿದರು.
ಪೊಲೀಸ್ ಸಿಬ್ಬಂದಿ ರಾಷ್ಟ್ರಗೀತೆ ನುಡಿಸಿ, ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು. ಬಳಿಕ ಎರಡು ನಿಮಿಷ ಮೌನ ಆಚರಣೆ ನಡೆಯಿತು.
ಸಚಿವರಾದ ಶರಣಬಸಪ್ಪ ದರ್ಶನಾಪೂರ, ಪ್ರಿಯಾಂಕ್ ಖರ್ಗೆ, ನಾಗೇಂದ್ರ, ಸತೀಶ್ ಜಾರಕಿಹೊಳಿ, ರಾಯಚೂರ ಸಂಸದ ರಾಜಾ ಅಮರೇಶ್ವರ ನಾಯಕ, ಅಮರೇಶ ಬಯ್ಯಾಪುರ, ರಾಜಾ ಕೃಷ್ಣಪ್ಪ ನಾಯಕ, ವಾಲ್ಮೀಕಿ ಶ್ರೀ, ಮಹಲ್ ರೋಜದ ಮಲ್ಲಿಕಾರ್ಜುನ ಮುತ್ಯಾ, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಐಜಿ ಅಜಯ್ ಹಿಲೋರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ, ಯಾದಗಿರಿ ಎಸ್ಪಿ ಸಂಗೀತಾ ಜಿ. ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.