ಮೈಸೂರು :ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆ ಮಾಡಿದ್ದ ನಂತರ ಮೈಸೂರಿನ ಜಿಲ್ಲಾ ಕಾಂಗ್ರೆಸ್ನಲ್ಲಿ ಯಾರು ಅಭ್ಯರ್ಥಿ ಎಂಬ ಚರ್ಚೆ ಆರಂಭವಾಗಿದೆ. ಕ್ಷೇತ್ರದಲ್ಲಿ ಪ್ರಬಲ ಒಕ್ಕಲಿಗ ಅಭ್ಯರ್ಥಿ ಹುಡುಕಾಟದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮದೇ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ಆ ಮೂಲಕ ಪ್ರಬಲ ಅಭ್ಯರ್ಥಿ ಆಯ್ಕೆಯಾಗಿ ಕಸರತ್ತು ಆರಂಭಿಸಿದ್ದಾರೆ.
ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್ ಗೌಡ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಈ ಬಾರಿ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯ ಒಂದು ಕಡೆಯಾದರೇ, ಮತ್ತೊಂದು ಕಡೆ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಸ್ಪರ್ಧೆಯಿಂದ, ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಹಾಕಬೇಕಾಗಿದೆ. ಈಗ ಹಿಂದೆ ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈ ತಪ್ಪಿದೆ. ಇದ್ದರಿಂದ ಒಕ್ಕಲಿಗ ಮತದಾರರಿಗೆ ಸ್ವಲ್ಪ ಅಸಮಾಧಾನವಿದೆ ಎನ್ನಲಾಗಿದೆ. ಇದರ ಲಾಭ ಪಡೆಯಲು ಕಾಂಗ್ರೆಸ್ ಮುಂದಾಗಿದೆ. ಹೀಗಾಗಿ ಕಾಂಗ್ರೆಸ್ ನಿಂದ ಪ್ರಬಲ ಯುವ ಮುಖಂಡರನ್ನು ಸ್ಪರ್ಧೆಗೆ ಇಳಿಸುವ ಪ್ಲಾನ್ ಹಾಕಿಕೊಂಡಿದೆ. ಇದರ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಪರ್ಧೆ ಮಾಡುವ ಇಚ್ಛೆ ಇದ್ದರೂ ಮಹಾರಾಜರ ಸ್ಪರ್ಧೆಯಿಂದ ಯತೀಂದ್ರ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.
ಪ್ರಮುಖವಾಗಿ ಸಿದ್ದರಾಮಯ್ಯ ಅವರ ಆಪ್ತರಾದ ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ ಮುಂಚೂಣಿಯಲ್ಲಿ ಇದ್ದರೆ, ಡಿಕೆ.ಶಿವಕುಮಾರ್ ಆಪ್ತರಾದ ಡಾ.ಸುಶ್ರುತ ಗೌಡ ಹೆಸರು ಕೂಡ ಕೇಳಿ ಬರುತ್ತಿದೆ. ಇದರ ಜೊತೆಗೆ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್ ಗೌಡರಿಗೆ ಕಾಂಗ್ರೆಸ್ ಗಾಳ ಹಾಕಿದ್ದು, ಕವೀಶ್ ಗೌಡ ಅವರನ್ನು ಡಿ.ಕೆ ಶಿವಕುಮಾರ್ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಕವೀಶ್ ಗೌಡ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಈ ಬಗ್ಗೆ ಕವಿಶ್ ಗೌಡ ಅವರನ್ನು ಈ ಟಿವಿ ಭಾರತ್ ದೂರವಾಣಿಯಲ್ಲಿ ಸಂಪರ್ಕ ಮಾಡಲು ಯತ್ನಿಸಿದಾಗ ಕರೆ ಸ್ವೀಕರಿಸಿಲ್ಲ.
ಡಿಕೆ.ಶಿವಕುಮಾರ್ ಆಪ್ತರಾದ ಡಾ.ಸುಶ್ರುತ ಗೌಡ ಜಿ.ಟಿ ದೇವೇಗೌಡ ನಿರಾಕರಣೆ : ಜೆಡಿಎಸ್ನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹಿನ್ನೆಲೆ ಅವರನ್ನು ಸಂಪರ್ಕಿಸಿದಾಗ, ನಾನೂ ಕಾಂಗ್ರೆಸ್ ಸೇರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎನ್ನುವುದು ಸುಳ್ಳು. ಇದೊಂದು ವದಂತಿ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ಗೆ ಸೇರುವ ಪ್ರಶ್ನೆಯೇ ಇಲ್ಲ ಎಂದು ಈ ಟಿವಿ ಭಾರತ್ಗೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ :ಲೋಕಸಭೆ ಟಿಕೆಟ್ ಹಂಚಿಕೆಗೆ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ನಿರ್ಧಾರ: ಡಿಸಿಎಂ ಡಿಕೆಶಿ