ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ: ಈಶ್ವರ್ ಖಂಡ್ರೆ ವಿಶ್ವಾಸ - Lok Sabha Election 2024 - LOK SABHA ELECTION 2024

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ನೀಡಿದ್ದ ಎಲ್ಲ ಐದು ಗ್ಯಾರಂಟಿಗಳನ್ನು ನಮ್ಮ ಸರ್ಕಾರ ಈಡೇರಿಸಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಇಮ್ಮಡಿಯಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Minister Ishwar Khandre
ಸಚಿವ ಈಶ್ವರ ಖಂಡ್ರೆ (Etv Bharat)

By ETV Bharat Karnataka Team

Published : May 10, 2024, 10:24 PM IST

ಬೆಂಗಳೂರು:ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂದು ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಹಂತದ ಮತದಾನ ಮುಕ್ತಾಯವಾಗಿದ್ದು, ರಾಜ್ಯಾದ್ಯಂತ ಬಂದಿರುವ ವರದಿಗಳ ರೀತ್ಯ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ನೀಡಿದ್ದ ಎಲ್ಲ ಐದು ಗ್ಯಾರಂಟಿಗಳನ್ನು ನಮ್ಮ ಸರ್ಕಾರ ಈಡೇರಿಸಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಇಮ್ಮಡಿಯಾಗಿದೆ.

ಈಗ ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪಂಚ ನ್ಯಾಯ ಹಾಗೂ 25 ಗ್ಯಾರಂಟಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಪಕ್ಷ ಈಡೇರಿಸುತ್ತದೆ ಎಂಬ ಪೂರ್ಣ ನಂಬಿಕೆ ದೇಶದ ಜನರಲ್ಲಿದೆ. ಹೀಗಾಗಿ ಗ್ಯಾರಂಟಿ ಅಲೆ ಎಲ್ಲೆಡೆ ಇದ್ದು, ಈ ಬಾರಿ ಇಂಡಿಯಾ ಕೂಡ ಸರ್ಕಾರ ರಚಿಸುವುದು ಖಚಿತ ಎಂದರು.

ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಹಿರಂಗವಾಗಲು ಡಿ ಕೆ ಶಿವಕುಮಾರ್ ಕಾರಣ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪದ ಕುರಿತಂತೆ ಪ್ರಶ್ನೆಗೆ ಉತ್ತರ ನೀಡಿದ ಈಶ್ವರ ಖಂಡ್ರೆ, ದಾಖಲೆಗಳೇ ಮಾತನಾಡುತ್ತವೆ. ದಾಖಲೆಗಳನ್ನು ಆಧರಿಸಿ ಎಸ್​​ಐಟಿ ತನಿಖೆ ನಡೆಸುತ್ತಿದೆ. ಕಾನೂನು ರೀತ್ಯ ಕ್ರಮ ಆಗುತ್ತದೆ. ಇದಕ್ಕೆ ರಾಜಕೀಯ ಬೆರೆಸುವುದು ಸರಿಯಲ್ಲ ಎಂದರು.

ಇಡೀ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನರನ್ನು ದಾರಿ ತಪ್ಪಿಸಲು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ಒತ್ತಾಯ ಮಾಡುತ್ತಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಸಮನಾಗಿದೆ. ಯಾರೋ ಏನೋ ಹೇಳಿದರೆ ಅದಕ್ಕೆ ಅರ್ಥವಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಎಸ್ಐಟಿ ತನಿಖೆ ನಡೆಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂಓದಿ:ಹೆಚ್​ಡಿಕೆಯಿಂದ ಪ್ರಜ್ವಲ್​ ರೇವಣ್ಣ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲು ಹುನ್ನಾರ: ಲಕ್ಷ್ಮಣ್ ಆರೋಪ - M Laxman

ABOUT THE AUTHOR

...view details