ಬಂಟ್ವಾಳ :ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ಅನುಮಾನಾಸ್ಪವಾಗಿ ಕೊಳೆತ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತವೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಚೆನ್ನೈತೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ್ (34) ಎಂದು ಗುರುತಿಸಲಾಗಿದೆ.
ಪದ್ಮನಾಭ ಸಾಮಂತ್ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿದ್ದು, ಭಾನುವಾರ ಬೆಳಗ್ಗೆ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದರು.
ಈ ಸಂದರ್ಭ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ ರಮಾನಾಥ ರೈ, ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆ ನಡೆಸುವಂತೆ ಒತ್ತಾಯಿಸಿದರು. ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಾಮಂತ್ ಹೇಳುತ್ತಿದ್ದನು. ಅದರಿಂದೇನಾದರೂ ಸಾವನ್ನಪ್ಪಿದನೇ ಅಥವಾ ಬೇರೆ ಯಾವ ಕಾರಣ ಕೃತ್ಯ ನಡೆದಿರಬಹುದು ಎಂಬ ಸಂಶಯಗಳ ನಿವಾರಣೆಯಾಗಬೇಕು ಎಂದರು.