ಬೆಂಗಳೂರು:ಪ್ರಕರಣವೊಂದರಲ್ಲಿ ಕರ್ತವ್ಯಲೋಪವೆಸಗಿದ ಆರೋಪದಡಿ ಅಮಾನತಿಗೆ ಶಿಫಾರಸಾದ ಕಾನ್ಸ್ಟೇಬಲ್ವೊಬ್ಬರು ಇನ್‌ಸ್ಪೆೆಕ್ಟರ್ ಹಾಗೂ ಎಸಿಪಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಪ್ರಕರಣವೇನು?: ಮೇ 7ರಂದು ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಕಾರ್ತಿಕೇಯನ್ ಎಂಬಾತನ ಹತ್ಯೆೆಯಾಗಿತ್ತು. ಆರೋಪಿ ಮಂಜು ಹಾಗೂ ಆತನ ಸಹಚರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯಕ್ಕೆ ಹಳೇ ದ್ವೇಷವೇ ಕಾರಣ ಎಂಬುದು ಗೊತ್ತಾಗಿತ್ತು. ಮತ್ತೊಂದೆಡೆ, ಆರೋಪಿ ಮಂಜು ಹಾಗೂ ಕಾರ್ತಿಕೇಯನ್ ನಡುವೆ ವೈಷಮ್ಯವಿರುವುದರ ಕುರಿತು ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗೆ ಮಾಹಿತಿ ಇತ್ತು. ಆದರೂ ಅವರು ಈ ವಿಚಾರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆೆ ತಂದಿರಲಿಲ್ಲ. ಈ ಹಿನ್ನೆೆಲೆಯಲ್ಲಿ ಇನ್‌ಸ್ಪೆಕ್ಟರ್ ಹಾಗೂ ಎಸಿಪಿ ಶಿಫಾರಸಿನ ಮೇರೆಗೆ ಠಾಣೆಯ ಕಾನ್ಸ್ಟೇಬಲ್ಗಳಾದ ಸಂತೋಷ್, ಪುಟ್ಟಸ್ವಾಮಿ ಮತ್ತು ವಿನೋದ್ ಎಂಬವರನ್ನು ಅಮಾನತುಗೊಳಿಸಿ ಪೂರ್ವ ವಿಭಾಗದ ಡಿಸಿಪಿ ಆದೇಶಿಸಿದ್ದರು.