ಬೆಂಗಳೂರು: ಭಾರತದ ಸಂವಿಧಾನ ಅಂಗೀಕಾರಗೊಂಡು 75ನೇ ವರ್ಷ ಪೂರ್ಣಗಳಿಸಿರುವ ಹಿನ್ನೆಲೆ ಕರ್ನಾಟಕ ಸರ್ಕಾರವು ಸಂವಿಧಾನ ಜಾಗೃತಿ ಸಮಾವೇಶವನ್ನು ಫೆ.25ರಂದು ಬೆಂಗಳೂರಿನಲ್ಲಿ ಆಯೋಜಿಸಿದೆ. ಸಮಾವೇಶ ಹಮ್ಮಿಕೊಂಡಿರುವ ಕೃಷ್ಣ ವಿಹಾರ್ ಅರಮನೆ ಮೈದಾನದ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಡೆಗೆ ವಾಹನಗಳ ಸಂಚಾರದ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಹಾಗೂ ಇತರೆ ಗಣ್ಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುತ್ತಿರುವುದರಿಂದ ಬೆಂಗಳೂರು ಸಂಚಾರಿ ಪೊಲೀಸರು ಕೆಲ ಮಾರ್ಗಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ.
ಬಸ್ಗಳಲ್ಲಿ ಬರುವವರು ಪ್ರವೇಶಿಸುವ ಮಾರ್ಗ, ಪಾರ್ಕಿಂಗ್ ವಿವರ: ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ಬಸ್ಗಳಲ್ಲಿ ವಿಂಡ್ಸರ್ ಮ್ಯಾನರ್ ಜಂಕ್ಷನ್- ಬಿ ಡಿ ಎ ಆಪ್ ಕ್ಯಾಂಪ್-ರಮಣಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ಬಸ್ ನಿಲ್ದಾಣ-ಕಾವೇರಿ ಜಂಕ್ಷನ್ -ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿವಿ ಟವರ್ ಬಳಿ ಇರುವ ಪ್ರವೇಶದ್ವಾರದ ಮೂಲಕ ಪ್ರವೇಶಿಸಿ ಸರ್ಕಸ್ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವುದು.
ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡ ತಿರುವು ಪಡೆದುಕೊಂಡು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿವಿ ಟವರ್ ಬಳಿ ಇರುವ ಸರ್ಕಸ್ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವುದು.
ಯಶವಂತಪುರ ಕಡೆಯಿಂದ ಬರುವ ವಾಹನಗಳು ಸರ್.ಸಿ.ವಿ.ರಾಮನ್ ರಸ್ತೆಯ ಬಿ.ಹೆಚ್.ಇ.ಎಲ್ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಜಯಮಹಲ್ ರಸ್ತೆಯಲ್ಲಿ ಸಾಗಿ ಟಿವಿ ಟವರ್ ಬಳಿ ಇರುವ ಸರ್ಕಸ್ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪುವುದು.