ಕರ್ನಾಟಕ

karnataka

ETV Bharat / state

ವಿಧಾನ ಪರಿಷತ್ ಚುನಾವಣೆ: ಸ್ವತಂತ್ರ ಅಭ್ಯರ್ಥಿಯಿಂದ ಮೊದಲ ನಾಮಪತ್ರ ಸಲ್ಲಿಕೆ - Council Election Nomination - COUNCIL ELECTION NOMINATION

ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಗೆ ನಡೆಯುತ್ತಿದ್ದು, ಈ ಸ್ಥಾನಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ಮೊದಲ ನಾಮಪತ್ರ ಸಲ್ಲಿಸಿದ್ದಾರೆ.

COUNCIL ELECTION
ಸ್ವತಂತ್ರ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ (ETV Bharat)

By ETV Bharat Karnataka Team

Published : Oct 1, 2024, 7:52 PM IST

ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ 4ನೇ ದಿನವಾದ ಮಂಗಳವಾರ, ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ಮೊದಲ ನಾಮಪತ್ರ ಸಲ್ಲಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಅ.21ರಂದು ಉಪ ಚುನಾವಣೆ ನಡೆಯಲಿದೆ.

ದ.ಕ. ಹಾಗೂ ಉಡುಪಿ ಜಿಲ್ಲೆಯ 392 ಸ್ಥಳೀಯಾಡಳಿತಗಳ 6,037 ಮಂದಿ ಮತ ಚಲಾಯಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಅ.3ರವರೆಗೆ ಅವಕಾಶವಿದೆ. ಅ.4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.7ರಂದು ನಾಮಪತ್ರ ವಾಪಸ್‌ಗೆ ಕೊನೆಯ ದಿನ. ಅ.21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ಹಾಗೂ ಅ.24ರಂದು ಮತ ಎಣಿಕೆ ನಡೆಯಲಿದೆ.

ದ.ಕ.ದಲ್ಲಿ 3,551, ಉಡುಪಿಯಲ್ಲಿ 2,486 ಮತದಾರರು:ದ.ಕ. ಸ್ಥಳೀಯಾಡಳಿತ ಪ್ರಾಧಿಕಾರ ಕ್ಷೇತ್ರದ ವ್ಯಾಪ್ತಿಗೆ ದ.ಕ. ಮತ್ತು ಉಡುಪಿ ಜಿಲ್ಲೆ ಸೇರಿದೆ. ಹೀಗಾಗಿ ಈ ಉಪ ಚುನಾವಣೆಯಲ್ಲಿ ಎರಡು ಜಿಲ್ಲೆಗಳ ಸ್ಥಳೀಯಾಡಳಿತಗಳ ಮತದಾರರು ಮತ ಚಲಾಯಿಸಲಿದ್ದಾರೆ.

ದ.ಕ.ದಲ್ಲಿ 234 ಮತಗಟ್ಟೆ 3,551 ಮತದಾರರು, ಉಡುಪಿಯಲ್ಲಿ 158 ಮತಗಟ್ಟೆ ಹಾಗೂ 2,486 ಮತದಾರರು ಇದ್ದಾರೆ. ಈ ಉಪ ಚುನಾವಣೆಯಲ್ಲಿ ದ.ಕ.ದಲ್ಲಿ ಗ್ರಾಮ ಪಂಚಾಯಿತಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಸೇರಿ 234 ಸ್ಥಳೀಯ ಸಂಸ್ಥೆಗಳಲ್ಲಿ 3,551 ಮಂದಿ ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ. ಉಡುಪಿಯಲ್ಲಿ 158 ಸ್ಥಳೀಯ ಸಂಸ್ಥೆಗಳಲ್ಲಿ 2,486 ಮಂದಿ ಮತ ಚಲಾಯಿಸಲಿದ್ದಾರೆ.

ಇದನ್ನೂ ಓದಿ: ವಿಧಾನಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಪುತ್ತೂರು ಬಿಜೆಪಿ ಅಭ್ಯರ್ಥಿ - Council Election

ABOUT THE AUTHOR

...view details