ಬೆಂಗಳೂರು:ಈವೆಂಟ್ ಮ್ಯಾನೇಜ್‌ಮೆಂಟ್ ಉದ್ಯಮದ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿಯ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರಪಾಳ್ಯದ ನಿವಾಸಿಗಳಾಗಿರುವ ಪ್ರಕಾಶ್ ಹಾಗೂ ಪಾರಿಜಾತ ಬಂಧಿತ ದಂಪತಿ.
ರಾಕೇಶ್ ಹಾಗೂ ಪೂಜಾ ಎಂಬ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದ ಆರೋಪಿಗಳು, ಬಡ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಉದ್ಯೋಗದ ಭರವಸೆ ನೀಡುತ್ತಿದ್ದರು. ಬಳಿಕ ಅವರನ್ನು ಈವೆಂಟ್ ಮ್ಯಾನೇಜ್‌ಮೆಂಟ್ ಕೆಲಸದ ಸೋಗಿನಲ್ಲಿ ವಾರಕ್ಕೊಮ್ಮೆ ತಮಿಳುನಾಡು, ಪಾಂಡಿಚೇರಿ ರೆಸಾರ್ಟ್ಗಳಲ್ಲಿ ನಡೆಯುವ ಪಾರ್ಟಿಗಳಿಗೆ ಕರೆದೊಯ್ದು ವೇಶ್ಯಾವಾಟಿಕೆಯ ಕೂಪಕ್ಕೆ ತಳ್ಳುತ್ತಿದ್ದರು. ಅನ್ಯ ರಾಜ್ಯದ ಶ್ರೀಮಂತ ಉದ್ಯಮಿಗಳು, ರೆಸಾರ್ಟ್ಗಳಿಗೆ ಭೇಟಿ ನೀಡುತ್ತಿದ್ದವರಿಂದ 25 ಸಾವಿರದಿಂದ 50 ಸಾವಿರದವರೆಗೂ ಹಣ ಪಡೆದು ದಂಧೆ ನಡೆಸುತ್ತಿದ್ದ ಆರೋಪಿಗಳು, ಮದ್ಯವನ್ನೂ ಸಹ ಪೂರೈಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.