ಕರ್ನಾಟಕ

karnataka

ETV Bharat / state

ಕೋಲಾರ: ಆತ್ಮಹತ್ಯೆಗೆ ಶರಣಾದ ದಂಪತಿ - couple suicide - COUPLE SUICIDE

ಕೋಲಾರ ಜಿಲ್ಲೆಯ ಕಲ್ವಮಂಜಲಿ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Couple suicide
ದಂಪತಿ ಆತ್ಮಹತ್ಯೆ (ETV Bharat)

By ETV Bharat Karnataka Team

Published : Jul 11, 2024, 7:25 PM IST

ಕೋಲಾರ :ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಲ್ವಮಂಜಲಿ ಗ್ರಾಮದಲ್ಲಿ ನಡೆದಿದೆ. ಗಂಡ ಲಕ್ಷ್ಮಣ್ ಹಾಗೂ ಪತ್ನಿ ಮಾಲಾಶ್ರೀ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಕಳೆದ ಹತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದರು. ಆಗಾಗ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗುತ್ತಿತ್ತು ಎಂಬುದಾಗಿ ತಿಳಿದು ಬಂದಿದೆ.

ಗಂಡ ಆಟೋ ಚಾಲಕನ ಕೆಲಸ ಮಾಡುತ್ತಿದ್ದು, ಪತ್ನಿ ಮಾಲಾಶ್ರೀ ಅಕ್ಷರ ದಾಸೋಹದಡಿ ಅಡುಗೆ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು‌. ಇಂದು ಮುಂಜಾನೆ ತರಕಾರಿ ಬಾಡಿಗೆಗೆ ಎಂದು ಕೋಲಾರದ ಮಾರ್ಕೆಟ್​ಗೆ ಬಂದಿದ್ದ ಗಂಡ ಲಕ್ಷ್ಮಣ್, ನಂತರ ಮನೆಗೆ ಹೋಗಿ ಪತ್ನಿಯೊಂದಿಗೆ ಗ್ರಾಮದ ಹೊರವಲಯದ ಮರವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ :ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ: ವರದಕ್ಷಿಣೆ ಕಿರುಕುಳ ಆರೋಪ

ABOUT THE AUTHOR

...view details