ಕರ್ನಾಟಕ

karnataka

ETV Bharat / state

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗಲೇ ದುರಂತ; ವಿದ್ಯುತ್ ಪ್ರವಹಿಸಿ ದಂಪತಿ ಸಾವು - Couple Electrocuted - COUPLE ELECTROCUTED

ವಿದ್ಯುತ್ ಸ್ಪರ್ಶಿಸಿ ಗಂಡ, ಹೆಂಡತಿ ಜಮೀನಿನಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Aug 16, 2024, 12:36 PM IST

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯ ಕಾಟೀಹಳ್ಳಿ ಗ್ರಾಮದ ಜಮೀನಿನಲ್ಲಿ ಗುರುವಾರ ಸಂಭವಿಸಿದೆ. ಲತಾ ಹಾಗೂ ನಾಗರಾಜ್ ಮೃತ ದಂಪತಿ.

ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟ್ರಾನ್ಸ್‌ಫಾರ್ಮರ್​ನಿಂದ ವಿದ್ಯುತ್ ಗ್ರೌಂಡ್ ಆಗಿದ್ದನ್ನು ಗಮನಿಸಿದೆ ತೆರಳಿದ ಪರಿಣಾಮ ಶಾಕ್​ ತಗುಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಮಾಯಕೊಂಡ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ತಕ್ಷಣ ಗ್ರಾಮಕ್ಕೆ ತೆರಳಿ ಸಂತಾಪ ಸೂಚಿಸಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.‌

ನಾಗರಾಜ್ ಹಾಗೂ ಲತಾ ಇಬ್ಬರೂ ರೈತರಾಗಿದ್ದು, ದಿನನಿತ್ಯ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಮಳೆ ಹೆಚ್ಚಾಗಿದ್ದರಿಂದ ಬೆಳೆಯ ಆರೈಕೆ ಮಾಡುತ್ತಿದ್ದರು. ಮಳೆಯಿಂದ ಇಡೀ ಟ್ರಾನ್ಸ್‌ಫಾರ್ಮರ್ ಒದ್ದೆಯಾಗಿದ್ದು, ವಿದ್ಯುತ್ ಗ್ರೌಂಡ್ ಆಗಿದೆ‌. ಇದನ್ನು ಗಮನಿಸದ ಇಬ್ಬರೂ ಕೆಲಸ ಮಾಡುತ್ತಾ ಟ್ರಾನ್ಸ್‌ಫಾರ್ಮರ್ ಬಳಿ ತೆರಳಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ:ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಬರುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು

ABOUT THE AUTHOR

...view details