ಕರ್ನಾಟಕ

karnataka

ETV Bharat / state

ಪೊಲೀಸರು ಜಪ್ತಿ ಮಾಡಿದ್ದ ಹಣ ಮರಳಿಸಲು ಸೂಚಿಸುವಂತೆ ಕೋರಿ ದರ್ಶನ್ ಅರ್ಜಿ : ವಿಚಾರಣೆ ಮುಂದೂಡಿಕೆ - DARSHAN PETITION HEARING

ಪೊಲೀಸರು ಜಪ್ತಿ ಮಾಡಿದ್ದ ಹಣ ಮರಳಿಸಲು ಸೂಚಿಸುವಂತೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್​ ಮುಂದೂಡಿಕೆ ಮಾಡಿದೆ.

darshan
ದರ್ಶನ್ (ETV Bharat)

By ETV Bharat Karnataka Team

Published : Jan 20, 2025, 5:51 PM IST

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಸಂದರ್ಭದಲ್ಲಿ ಜಪ್ತಿ ಮಾಡಿರುವ ತಮ್ಮ ಹಣವನ್ನು ವಾಪಸ್ ನೀಡಲು ಸೂಚಿಸುವಂತೆ ಆರೋಪಿಗಳಾದ ನಟ ದರ್ಶನ್ ಹಾಗೂ ಪ್ರದೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಫೆಬ್ರವರಿ 1ಕ್ಕೆ ಮುಂದೂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದರ್ಶನ್, ಅವರ ಪತ್ನಿ ಹಾಗೂ ಮತ್ತೋರ್ವ ಆರೋಪಿ ಪ್ರದೋಷ್ ಮನೆಯಲ್ಲಿದ್ದ, ಆರೋಪಿಗಳು ಸಾಕ್ಷ್ಯ ನಾಶಕ್ಕಾಗಿ ಸಂಗ್ರಹಿಸಿಡಲಾಗಿತ್ತು ಎನ್ನಲಾದ 37 ಲಕ್ಷ ರೂ. ನಗದು ಹಣ ಜಪ್ತಿ ಮಾಡಿದ್ದರು. ಇಷ್ಟೊಂದು ಪ್ರಮಾಣದ ನಗದನ್ನು ಮನೆಯಲ್ಲಿ ಇಟ್ಟಿದ್ದು ಯಾಕೆ ಎಂದು ಆದಾಯ ತೆರಿಗೆ ಇಲಾಖೆ ದರ್ಶನ್ ಅವರನ್ನ ಪ್ರಶ್ನಿಸಿತ್ತು.

ಇದನ್ನೂ ಓದಿ:ಪತ್ನಿ ಜೊತೆ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆದ ದರ್ಶನ್​​​: ವಿಶೇಷ ಪೂಜೆ ಸಲ್ಲಿಕೆ

ಪ್ರಸ್ತುತ ತುರ್ತು ಹಣದ ಅವಶ್ಯಕತೆಯಿದ್ದು, ಜಪ್ತಿ ಮಾಡಲಾದ ಹಣವನ್ನ ವಾಪಸ್ ನೀಡುವಂತೆ ಕೋರಿ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ದರ್ಶನ್ ಹಾಗೂ ಪ್ರದೋಷ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:ಗನ್ ಪರವಾನಗಿ ರದ್ದು ಮಾಡದಂತೆ ಪೊಲೀಸ್ ಇಲಾಖೆಗೆ ನಟ ದರ್ಶನ್ ಮನವಿ

ABOUT THE AUTHOR

...view details