ಕರ್ನಾಟಕ

karnataka

ETV Bharat / state

ನಟ ದರ್ಶನ್‌ಗೆ ಮತ್ತೆ ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದ ನ್ಯಾಯಾಲಯ - DARSHAN ALLOWED TO VISIT MYSURU

ನಟ ದರ್ಶನ್‌ಗೆ ಮೈಸೂರು ಜಿಲ್ಲಾ ಪ್ರವಾಸ ಮಾಡಲು ಮತ್ತೊಮ್ಮೆ ನ್ಯಾಯಾಲಯವು ಅನುಮತಿ ನೀಡಿದೆ.

darshan
ದರ್ಶನ್‌ (ETV Bharat)

By ETV Bharat Karnataka Team

Published : Jan 31, 2025, 10:39 PM IST

ಬೆಂಗಳೂರು:ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್​​ಗೆ ಮೈಸೂರಿಗೆ ಹೋಗಲು ಮತ್ತೆ ಅನುಮತಿಸಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.

ಜನವರಿ 24ರಿಂದ ಫೆ.24ರ ವರೆಗೆ ಮೈಸೂರು, ಧರ್ಮಸ್ಥಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲು ದರ್ಶನ್‌ಗೆ ಅನುಮತಿ ನೀಡುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ನಂತರ ಜ.28ರಿಂದ ಫೆ.10ರ ವರೆಗೆ ಮೈಸೂರಿಗೆ ತೆರಳಿ ತನ್ನ ವೈದ್ಯರನ್ನು ಭೇಟಿ ಮಾಡಲು, ಫಾರ್ಮ್ ಹೌಸ್ ಹಾಗೂ ತಾಯಿ ಮನೆಯಲ್ಲಿ ನೆಲೆಸಲು ಅನುಮತಿ ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಎರಡೂ ಅರ್ಜಿಗಳನ್ನು ತಿರಸ್ಕರಿಸುವಂತೆ ತನಿಖಾಧಿಕಾರಿಗಳ ಪರ ವಕೀಲರು ಕೋರಿದ್ದರು.

ಈ ಬಗ್ಗೆ ವಾದ ಆಲಿಸಿದ ನ್ಯಾಯಾಲಯ, ಜ.28ರಿಂದ ಫೆ.10ರ ವರೆಗೆ ಕೇವಲ ಮೈಸೂರಿಗೆ ಪ್ರಯಾಣಿಸಲು ದರ್ಶನ್‌ಗೆ ಅನುಮತಿ ನೀಡಿ ಆದೇಶಿಸಿದೆ. ಈ ಮೂಲಕ ಮೂರನೇ ಬಾರಿ ಮೈಸೂರಿಗೆ ತೆರಳಲು ನ್ಯಾಯಾಲಯ ಅನುಮತಿಸಿದೆ. ಈ ಹಿಂದೆ ಎರಡು ಸಲ ಮೈಸೂರಿಗೆ ತೆರಲು ದರ್ಶನ್‌ಗೆ ನ್ಯಾಯಾಲಯ ಅನುಮತಿಸಿ ಆದೇಶಿಸಿತ್ತು.

ಇದನ್ನೂ ಓದಿ:ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ

ABOUT THE AUTHOR

...view details