ಬೆಂಗಳೂರು:ನಗರದ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳ ಎನ್ಐಎ ಕಸ್ಟಡಿ ಅವಧಿ ವಿಸ್ತರಿಸಲಾಗಿದೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ರನ್ನು ಏಪ್ರಿಲ್ 29ರವರೆಗೂ ಎನ್ಐಎ ವಶಕ್ಕೆ ಒಪ್ಪಿಸಿ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದ ಎನ್ಐಎ ಅಧಿಕಾರಿಗಳು ಬೆಂಗಳೂರಿಗ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಇಂದು (ಸೋಮವಾರ) ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಎನ್ಐಎ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಪುನಃ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು.