ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಖಾಸಗಿ ವ್ಯಕ್ತಿಯೊಬ್ಬರ ತೋಟದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿದ್ದ ಡ್ರೋನ್ ಪ್ರತಾಪ್‌ಗೆ ಇಂದು ಮಧುಗಿರಿಯ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಪ್ರತಾಪ್, ತುಮಕೂರಿನ ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟದ ಪ್ರಯೋಗ ಮಾಡಿದ್ದರು. ಇದರ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ರನ್ನು ಅರೆಸ್ಟ್ ಮಾಡಿದ್ದರು. ಬಳಿಕ ಅವರ ಇಬ್ಬರು ಸ್ನೇಹಿತರನ್ನು ಕೂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಡಿಸೆಂಬರ್ 26ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು.