ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.
ಸೂರಜ್ ಆಪ್ತ ಎಂ.ಎಲ್. ಶಿವಕುಮಾರ್ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ದು, ಜುಲೈ 18ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ:ಸೂರಜ್ ಆಪ್ತ ಎನ್ನಲಾದ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಸೂರಜ್ ರೇವಣ್ಣ, ಚನ್ನರಾಯಪಟ್ಟಣದ ರಕ್ಷಿತ್ ಮತ್ತು ಹಾಸನದ ಸಚಿನ್ ವಿರುದ್ಧ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.