ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖಾ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಸೇರಿದೆ. ಜಸ್ಟೀಸ್ ಜಾನ್ ಮೈಕೆಲ್ ಡಿ. ಕುನ್ಹಾ ಅವರ ನೇತೃತ್ವದ ತಂಡ ತಮ್ಮ ತನಿಖಾ ವರದಿಯನ್ನು ಶನಿವಾರ ರಾತ್ರಿ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು.
ಕೋವಿಡ್ ಹಗರಣ ತನಿಖೆ: ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ ತನಿಖಾ ತಂಡ (ETV Bharat) 'ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದ ತನಿಖಾ ಆಯೋಗ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ' ಎಂದು ಕರ್ನಾಟಕ ಸಿಎಂ ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಶೀಲ್ಡ್ ಮಾಡಿರುವ ವರದಿ ಸಿಎಂ ಕೈ ಸೇರಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿಯಲ್ಲಿ ಏನಿದೆ ಮತ್ತು ಸಿಎಂ ಸಿದ್ದರಾಮಯ್ಯ ಅವರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಕೋವಿಡ್ 19 ಹಗರಣ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್ ವಿರುದ್ಧ ಅಕ್ರಮ ನಡೆಸಿರುವ ಗಂಭೀರ ಆರೋಪ ಬಂದಿತ್ತು. ವೆಂಟಿಲೇಟರ್, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೊವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದಲ್ಲಿ ತನಿಖೆ ತಂಡ ರಚಿಸಿ, ತನಿಖೆಗೆ ಆದೇಶಿಸಿತ್ತು. ಸದ್ಯ ತನಿಖಾ ತಂಡ ತನ್ನ ವರದಿಯನ್ನು ಸಲ್ಲಿಸಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್: ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Prosecution against Siddaramaiah