ಕರ್ನಾಟಕ

karnataka

ETV Bharat / state

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ - ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ

ವರಸಿದ್ಧಿ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ ನೀಡಿದರು.

ಸೂರ್ಯಕುಮಾರ್ ಯಾದವ್ ದಂಪತಿ
ಸೂರ್ಯಕುಮಾರ್ ಯಾದವ್ ದಂಪತಿ (ETV Bharat)

By ETV Bharat Karnataka Team

Published : Nov 19, 2024, 9:10 PM IST

ದಕ್ಷಿಣ ಕನ್ನಡ:ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಭೇಟಿ ನೀಡಿ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.

ದೇವಸ್ಥಾನಕ್ಕೆ ಆಗಮಿಸಿದ ಸೂರ್ಯಕುಮಾರ್ ಯಾದವ್ ದಂಪತಿ ದೇವರ ದರ್ಶನ ಪಡೆದು ಮಹಾಭಿಷೇಕ ಸೇವೆ ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ವತಿಯಿಂದ ಸೂರ್ಯಕುಮಾರ್ ದಂಪತಿಯನ್ನು ಗೌರವಿಸಲಾಯಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಮತ್ತಿತರರು ಉಪಸ್ಥಿತರಿದ್ದರು.

ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಸೂರ್ಯಕುಮಾರ್ ಯಾದವ್ ಅವರು ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಇದನ್ನೂ ಓದಿ:ನಮ್ಮ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ABOUT THE AUTHOR

...view details