ಕರ್ನಾಟಕ

karnataka

ETV Bharat / state

ನಮ್ಮ ಡ್ರಾಮ (ಡಿ) ಕಿಂಗ್ (ಕೆ) ಶಿವಕುಮಾರ್ ಇಷ್ಟೆಲ್ಲಾ ಮಾಡ್ತಿರೋದು ಸಿಎಂ ಗಾದಿಗಾಗಿ: ಸಿ.ಟಿ.ರವಿ - C T RAVI

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಟೀಕಾಸಮರ ನಡೆಸಿದ್ದಾರೆ.

MLC C T Ravi
ವಿಧಾನ ಪರಿಷತ್​ ಸದಸ್ಯ ಸಿ.ಟಿ.ರವಿ (ETV Bharat)

By ETV Bharat Karnataka Team

Published : Jan 12, 2025, 3:37 PM IST

ಬೆಂಗಳೂರು:"ನಮ್ಮ ಡ್ರಾಮ(D) ಕಿಂಗ್ (K) ಶಿವಕುಮಾರ್ ಅವರು ಇಷ್ಟೆಲ್ಲಾ ಡ್ರಾಮಾ ಮಾಡುತ್ತಿರುವುದು ಮುಖ್ಯಮಂತ್ರಿ ಗಾದಿಯನ್ನೇರುವ ಹಪಾಹಪಿಗಾಗಿ ಎಂದು ರಾಜಕೀಯದ ಮೊಗಸಾಲೆಗಳಲ್ಲಿ ಹೇಳಿಕೊಂಡು ಸುತ್ತುತ್ತಿರುವುದು ನಿಜವೇ?" ಎಂದು ಸಿ.ಟಿ.ರವಿ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, "ಮಾನ್ಯ ಡಿ (ಡ್ರಾಮ) ಕೆ (ಕಿಂಗ್) ಶಿವಕುಮಾರ್ ಅವರೇ, ನೀವು ಉಪಮುಖ್ಯಮಂತ್ರಿಗಳು ಎನ್ನುವುದನ್ನು ಮರೆತು ಬಿಟ್ಟಿದ್ದೀರಿ. ನೀವು ನ್ಯಾಯಾಧೀಶರ ಸ್ಥಾನದಲ್ಲಿದ್ದು, ಸತ್ಯಾಸತ್ಯತೆಯನ್ನು ವಿಚಾರ ಮಾಡಬೇಕಾದವರು. ದುರದೃಷ್ಟವಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದೀರಿ. ಯಾರು ಮೋಹ, ಮದ, ಮಾತ್ಸರ್ಯಗಳಿಂದ ಹೊರಗಿದ್ದು ನೋಡುತ್ತಾರೋ ಅವರಿಗೆ ಸತ್ಯಾಸತ್ಯಾತೆ ಗೊತ್ತಾಗುತ್ತದೆ. ಮೋಹಪರವಶರಾದವರಿಗೆ, ಅಧಿಕಾರದ ಮದದಿಂದ ಕೂಡಿದವರಿಗೆ, ಮಾತ್ಸರ್ಯದ ರಾಜಕಾರಣ ಮಾಡುವವರಿಗೆ ಸತ್ಯ ಅರ್ಥ ಆಗಲಿಕ್ಕೆ ಸಾಧ್ಯವಿಲ್ಲ" ಎಂದಿದ್ದಾರೆ.

"ಸಭಾಪತಿಗಳು ರೂಲಿಂಗ್ ನೀಡಿದ ನಂತರ ನೀವುಗಳು, ನಿಮ್ಮ ಪಕ್ಷದ ಶಾಸಕರು ನಡೆದುಕೊಂಡ ರೀತಿ ನಿಮಗುಚಿತವೇ? ಗೂಂಡಾಗಳನ್ನೂ, ಜೊತೆಗಾರರನ್ನು ಎತ್ತಿಕಟ್ಟಿ, ಶಾಸಕಾಂಗದ ದೇಗುಲವಾದ "ಸುವರ್ಣ ಸೌಧದಲ್ಲಿ" ನನ್ನ ಮೇಲೆ ನಡೆದ ಹಲ್ಲೆಯನ್ನು ಯಾವ ದೃಷ್ಟಿಯಿಂದ ನೋಡುತ್ತೀರಿ? ಇದನ್ನು ಗಾಂಧಿಗಿರಿ ಎನ್ನಬೇಕೇ ಅಥವಾ ಗೂಂಡಾಗಿರಿ ಎನ್ನಬೇಕೇ" ಎಂದು ಪ್ರಶ್ನಿಸಿದ್ದಾರೆ.

"ನಿಮ್ಮ ಸರ್ಕಾರದ ಪೊಲೀಸರು ಮಾಡಿದ ಅಸಾಂವಿಧಾನಿಕ, ಅನೈತಿಕ ಬಂಧನವನ್ನು ಏನೆಂದು ಭಾವಿಸುತ್ತೀರಿ? ಪೊಲೀಸರು ರಾತ್ರಿ ಇಡೀ ನಡೆಸಿದ ದೌರ್ಜನ್ಯದ ಹಿಂದೆ ಯಾರ ಕುಮ್ಮಕ್ಕಿದೆ? ಯಾರ ಕಾಣದ ಕೈಗಳ ಪಾತ್ರವಿದೆ? ಇದನ್ನು ಮೋಹ ಮದ ಮಾತ್ಸರ್ಯಗಳಿಂದ ಹೊರಗಿದ್ದು ನೋಡಿ, ಸತ್ಯದರಿವು ನಿಮಗಾಗುತ್ತದೆ. ಕಪಟ ನಾಟಕ ಯಾರು ಮಾಡುತ್ತಿದ್ದಾರೆ ಎನ್ನುವುದೂ ಗೊತ್ತಾಗುತ್ತದೆ" ಎಂದು ಟೀಕಿಸಿದ್ದಾರೆ.

"ಸಾರ್ವಜನಿಕ ಬದುಕಿನಲ್ಲಿ ಸಿ.ಟಿ.ರವಿಯನ್ನು ಹೋರಾಟಗಾರ ಎಂದು ಗುರುತಿಸಿದ್ದಾರೆ. ರವಿಯನ್ನು ಕೆಲಸಗಾರ ಎಂದು ಗುರುತಿಸಿದ್ದಾರೆ. ರವಿಯನ್ನು ಪಕ್ಷನಿಷ್ಠ, ಸಿದ್ಧಾಂತ ಬದ್ಧ ಎಂದು ಗುರುತಿಸುತ್ತಾರೆ ಎಂಬುದು ನನ್ನ ಕರ್ನಾಟಕದ ಜನತೆಗೆ ತಿಳಿದಿದೆ. "ಯದ್ಭಾವಂ ತದ್ಭವತಿ" ಎಂಬ ಮಾತಿನಂತೆ "ಯಾರು ಹೇಗಿದ್ದಾರೋ ಇತರರೂ ಹಾಗೇ ಎಂದು ಭಾವಿಸುತ್ತಾರೆ" ಸನ್ಮಾನ್ಯ "ಉಪಮುಖ್ಯಮಂತ್ರಿ" ಯವರೇ. ಅಂದಹಾಗೆ ಕಾಂಗ್ರಸ್ಸಿನ ಕೆಲ ನಾಯಕರು "ನಮ್ಮ ಡ್ರಾಮ(D) ಕಿಂಗ್ (K) ಶಿವಕುಮಾರ್ ಅವರು ಇಷ್ಟೆಲ್ಲಾ ಡ್ರಾಮ ಮಾಡುತ್ತಿರುವುದು ಮುಖ್ಯಮಂತ್ರಿ ಗಾದಿಯನ್ನು ಏರುವ ಹಪಹಪಿಗಾಗಿ" ಎಂದು ರಾಜಕೀಯದ ಮೊಗಸಾಲೆಗಳಲ್ಲಿ ಹೇಳಿಕೊಂಡು ಸುತ್ತುತ್ತಿರುವುದು ನಿಜವೇ" ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ಸಿ ಟಿ ರವಿ ಕೇಸ್​ ರೂಲಿಂಗ್ ಬಳಿಕವೂ ಸಿಐಡಿ ತನಿಖೆಗೆ ವಹಿಸಿರುವುದಕ್ಕೆ ಆಕ್ಷೇಪ; ಗೃಹ ಸಚಿವರಿಗೆ ಹೊರಟ್ಟಿ ಪತ್ರ

ABOUT THE AUTHOR

...view details