ಕರ್ನಾಟಕ

karnataka

ETV Bharat / state

ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಸಿ.ಟಿ.ರವಿ 8 ಪ್ರಶ್ನೆ - C T Ravi - C T RAVI

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ್ದ ರಾಹುಲ್​ ಗಾಂಧಿ ಅವರಿಗೆ ಸಿ.ಟಿ.ರವಿ ಎಂಟು ಪ್ರಶ್ನೆಗಳನ್ನು ಕೇಳಿದ್ದಾರೆ.

Former Minister C T Ravi
ಸಿ.ಟಿ.ರವಿ (ETV Bharat)

By ETV Bharat Karnataka Team

Published : Jun 7, 2024, 2:55 PM IST

ಬೆಂಗಳೂರು: ಲೋಕಸಭಾ ಚುನಾವಣೆ 204ರ ಫಲಿತಾಂಶದ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ನಾಯಕ ಸಿ.ಟಿ.ರವಿ ಕೆಲವು ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

  1. ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ಆರೋಪದಿಂದಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾಗೇಂದ್ರ ಅವರನ್ನು ಪಕ್ಷದಿಂದ ಯಾವಾಗ ಉಚ್ಛಾಟಿಸುತ್ತೀರಿ?
  2. ಎಲ್ಲವನ್ನೂ ನುಂಗುವ ಪ್ರಾಚೀನ "ಸಿದ್ಧ ಹಸ್ತ" ಕಲೆ ಕರಗತ ಮಾಡಿಕೊಂಡ ನಿಮ್ಮದು 100% ಭ್ರಷ್ಟ ಸರ್ಕಾರ ಎಂಬುದನ್ನು ಒಪ್ಪಿಕೊಳ್ಳುತ್ತೀರಾ?
  3. ಭ್ರಷ್ಟಾಚಾರ ತಮ್ಮ ಮೂಗಿನ ಕೆಳಗೆ ನಡೆಯುತ್ತಿರುವಾಗ ಜಾಣ ಕುರುಡನಂತೆ ವರ್ತಿಸಿದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ನಿಮ್ಮ ಕ್ರಮ ಏನು?
  4. ಶಿಕ್ಷಣ ಮಂತ್ರಿ 5, 8 ಮತ್ತು 9ನೇ ತರಗತಿಯ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇವರ ಬದಲಾವಣೆ ಎಂದು?
  5. ಲೋಕಸಭಾ ಚುನಾವಣೆಯಲ್ಲಿ ತಮ್ಮ ಜಿಲ್ಲೆಯಲ್ಲಿ ಮುನ್ನಡೆ ಕೊಡಿಸಲು ವಿಫಲವಾಗಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ 17 ಸಚಿವರ ವಿರುದ್ದ ಕ್ರಮ ಯಾವಾಗ ತೆಗೆದುಕೊಳ್ಳುತ್ತೀರಿ?
  6. ರಾಜ್ಯದ ಅಭಿವೃದ್ಧಿಯನ್ನು ನಿಮ್ಮ ಮತಬ್ಯಾಂಕ್ ರಾಜಕೀಯಕ್ಕಾಗಿ ಬಲಿಕೊಟ್ಟಿದ್ದೀರಿ. ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯಲ್ಲಿ ಹಿನ್ನಡೆಯಾಗಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಇದಕ್ಕೆ ಯಾರು ಹೊಣೆ?
  7. ಅನೇಕ ಉದ್ದಿಮೆಗಳು ನೆರೆ ರಾಜ್ಯಗಳ ಪಾಲಾಗಿ ರಾಜ್ಯದ ಯುವಕರು ಉದ್ಯೋಗ ವಂಚಿತರಾಗಿದ್ದಾರೆ. ನಿಮ್ಮ ಸರಕಾರದ ನಿಷ್ಕ್ರಯತೆಗೆ ರಾಜ್ಯದ ಕ್ಷಮೆ ಯಾಚಿಸುತ್ತೀರಾ?
  8. ರಾಜ್ಯದಲ್ಲಿ ಸರ್ಕಾರವನ್ನು ಟೀಕಿಸಿದವರನ್ನು ಬಂಧಿಸಿ, ಅಭಿಪ್ರಾಯ ಸ್ವಾತಂತ್ರ ಹತ್ತಿಕ್ಕಿ, ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ದವಾಗಿ ನಿಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಇದರ ಬಗ್ಗೆ ನಿಮ್ಮ ಅಭಿಪ್ರಾಯ?.

ABOUT THE AUTHOR

...view details