ಚಿಕ್ಕಮಗಳೂರು:ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಿಡುಗಡೆ ಆದೇಶದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಚಿಕ್ಕಮಗಳೂರು ನಗರದ ಬಸವನ ಹಳ್ಳಿ ಮುಖ್ಯರಸ್ತೆಯಲ್ಲಿರುವ ಸಿ.ಟಿ.ರವಿ ನಿವಾಸದ ಮುಂಭಾಗ ಸೇರಿದ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸಿ.ಟಿ.ರವಿ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಡಿಕೆಶಿ ವಿರುದ್ಧ ಘೋಷಣೆ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಕಾರ್ಯಕರ್ತರು, ಶಾಸಕ ಸಿ.ಟಿ.ರವಿ ಪರ ಘೋಷಣೆ ಕೂಗುತ್ತಾ ಕುಣಿದು ಕುಪ್ಪಳಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆಯಿತು.