ಬೆಳಗಾವಿ: ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತಾಗಿ ಅಸಭ್ಯ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ. ಅವರ ವಿರುದ್ಧ ಸಭಾಪತಿ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಸಿ.ಟಿ.ರವಿ ತಾವು ಅವಾಚ್ಯ ಪದ ಬಳಕೆ ಮಾಡಿರುವುದನ್ನು ಅಲ್ಲಗಳೆದಿರುವ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರು ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದಾರೆ. ಆ ಸಂದರ್ಭದಲ್ಲಿ ನಾನು ಪರಿಷತ್‌ನಲ್ಲಿ ಇರಲಿಲ್ಲ ಎಂದು ತಿಳಿಸಿದರು.