ಬೆಂಗಳೂರು:ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತಗಳು ತೀವ್ರ ಸ್ವರೂಪ ಪಡೆಯುತ್ತಿರುವ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ಅಕ್ಟೋಬರ್ 17 ರಂದು 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈ ಜಿಲ್ಲೆಗಳಲ್ಲಿ ಅಲರ್ಟ್: ಪ್ರಮುಖವಾಗಿ ಅಕ್ಟೋಬರ್ 17 ರ ಬೆಳಗ್ಗೆ 8.30 ರಿಂದ ಅಕ್ಟೋಬರ್ 18 ರ ಬೆಳಗ್ಗೆ 8.30 ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.
ಅಲ್ಲದೆ ಪ್ರತ್ಯೇಕವಾಗಿ ಇಂದಿನಿಂದ ಮೂರು ದಿನ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಮೊದಲ ಎರಡು ದಿನ ಯೆಲ್ಲೋ ಮತ್ತು ಇನ್ನೊಂದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಚಾಮರಾಜನಗರಕ್ಕೆ ಇಂದು ಯೆಲ್ಲೋ, ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅಕ್ಟೋಬರ್ 17 ರಿಂದ 18ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಸಹ ಅಕ್ಟೋಬರ್ 17 ರಂದು ಯೆಲ್ಲೋ ಅಲರ್ಟ್ ಇರಲಿದೆ. ಇನ್ನು ಕೊಡಗು ಜಿಲ್ಲೆಗೆ ಇಂದು, ಅಕ್ಟೋಬರ್ 16 ರಂದು ಯೆಲ್ಲೋ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉಳಿದಂತೆ ಹಾವೇರಿ, ಧಾರವಾಡ, ಹಾಸನ ಜಿಲ್ಲೆಗಳಿಗೆ ಅಕ್ಟೋಬರ್ 16 ಮತ್ತು 17 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉಳಿದ ಹಲವು ಕರಾವಳಿ, ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಒಂದೆರಡು ದಿನಗಳ ಕಾಲ ನೀಡಲಾಗಿದೆ.