ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣದಿಂದ ತಾಪಮಾನ ಕಡಿಮೆಯಾಗಿದ್ದು, ಕೆಲವೆಡೆ ಮಂಜು ಮುಸುಕಿದ ವಾತಾವರಣ ಕಂಡು ಬಂರುತ್ತಿದೆ.
ರಾಜ್ಯದಲ್ಲಿ ಒಣ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 5 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಂಭವವಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಇದು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.