ಮಂಗಳೂರು:ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳಿಗೆ ಅಡಚಣೆ ಉಂಟಾಗದಂತೆ ದಕ್ಷಿಣ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈ ಮೂಲಕ ಪೋಷಕರು ಮತ್ತು ವಿದ್ಯಾರ್ಥಿಗಳ ಆತಂಕ ದೂರ ಮಾಡಿದೆ.
ಸಿಇಟಿ ಸೇರಿದಂತೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ಮತ್ತು ಸಕಾಲದಲ್ಲಿ ಅರ್ಜಿ ಸಲ್ಲಿಸಲು ತೊಂದರೆಯಾದರೆ ಸಂಬಂಧಿಸಿದ ಆಯಾ ತಾಲೂಕು ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿಯನ್ನು ಸಂಪರ್ಕಿಸುವಂತೆ ಡಿಸಿ ಮುಲೈ ಮುಗಿಲನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳ ಸಹಾಯವಾಣಿ ನಂಬರ್ ಪ್ರಕಟಿಸಿ, ಆ ಮೂಲಕ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯುವ ಕುರಿತು ಸಂಪರ್ಕಿಸುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಂಬಂಧ ಸಹಾಯವಾಣಿ ಕಚೇರಿಯನ್ನು ಸಂಪರ್ಕಿಸುವವರಿಗೆ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕಾಗಿ ಈ ಸಹಾಯವಾಣಿಗಳನ್ನು ಸಂಪರ್ಕಿಸಿ:
ಜಿಲ್ಲಾಧಿಕಾರಿ ಕಚೇರಿ - 2220584, 2220590 (STD Code 0824)
ಪುತ್ತೂರು ತಹಶೀಲ್ದಾರ್ ಕಚೇರಿ - 9448624978, 230349/232799 (STD Code 08251)
ಬಂಟ್ವಾಳ ತಹಶೀಲ್ದಾರ್ ಕಚೇರಿ - 9986070657, 232120/232500 (STD Code 08255)