ಬೆಳ್ತಂಗಡಿ(ದಕ್ಷಿಣ ಕನ್ನಡ):ಡಿಸೇಲ್ ಪೈಪ್ ಲೈನ್ ಕೊರೆದು 9ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿರುವ ಘಟನೆ ಬೆಳ್ತಂಗಡಿ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ನಡೆದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯೆ ಅವಧಿಯಲ್ಲಿ ಕಳ್ಳರು ಡಿಸೇಲ್ ಪೈಪ್ ಲೈನ್ನಲ್ಲಿ ರಂಧ್ರ ಕೊರೆದು 2.5 ಇಂಚು ಹೆಚ್ ಡಿಪಿಇ ಪೈಪ್ ಮೂಲಕ ಅಂದಾಜು 12,000 ಲೀಟರ್ ಡಿಸೇಲ್ ಅನ್ನು ಕಳವು ಮಾಡಿದ್ದಾರೆ. ಕಳುವಾಗಿರುವ ಡಿಸೇಲ್ನ ಮೌಲ್ಯ ರೂ. 9,60,000 ಎಂದು ಪರಿಗಣಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು: ಘಟನೆ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 19/2024 ಕಲಂ: 427,285, 379 ಐ ಪಿ ಸಿ ಕಲಂ 15(2) ಪೆಟ್ರೊನೆಟ್ ಕಾಯ್ದೆ ಕಲಂ 3(2) ಪ್ರಿವೆನ್ಸೆನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕಳ್ಳರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಚಿನ್ನಾಭರಣ ಜಪ್ತಿ:ಚಿಕ್ಕಮಗಳೂರು ತಾಲೂಕಿನ ಮಾಗಡಿ ಚೆಕ್ ಪೋಸ್ಟ್ ಬಳಿ ಸರ್ಕಾರಿ ಬಸ್‍ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ ಸುಮಾರು ಅರ್ಧ ಕೆಜಿ ಬಂಗಾರದ ಚಿನ್ನಾಭರಣಗಳನ್ನು ಚುನಾವಣೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜಿಲ್ಲೆಯ ಅಜ್ಜಂಪುರ, ಮೂಡಿಗೆರೆ ತಾಲೂಕಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಲಕ್ಷಕ್ಕೂ ಹೆಚ್ಚು ನಗದನ್ನು ಅಧಿಕಾರಿಗಳು ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಚಿನ್ನದ ನೆಕ್ಲೇಸ್, ಬ್ರಾಸ್ಲೈಟ್, ಬಳೆ, ಸರ, ಉಂಗುರ ಜಪ್ತಿ:ಮಾಗಡಿ ಚೆಕ್ ಪೋಸ್ಟ್ನಲ್ಲಿ ಬೆಂಗಳೂರಿನಿಂದ - ಚಿಕ್ಕಮಗಳೂರಿಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಚಿನ್ನದ ತಾಳಿ, ನೆಕ್ಲೇಸ್, ಬ್ರಾಸ್ಲೈಟ್, ಬಳೆ, ಸರ, ಉಂಗುರಗಳುಳ್ಳ ಅರ್ಧ ಕೆಜಿಯಷ್ಟು ಚಿನ್ನಾಭರಣಗಳನ್ನ ಸೀಜ್ ಮಾಡಲಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದು, ಆಭರಣಗಳಿಗೆ ಸಂಬಂಧಿಸಿದ ಯಾವುದೇ ದಾಖಲೆ ನೀಡದ ಹಿನ್ನೆಲೆ ಆಭರಣಗಳನ್ನು ಸೀಜ್ ಮಾಡಲಾಗಿದೆ. ಈ ಚಿನ್ನಾಭರಣಗಳ ಒಟ್ಟು ಮೌಲ್ಯ ಲಕ್ಷಾಂತರ ಮೌಲ್ಯದ್ದು ಎಂದು ಅಧಿಕಾರಿಗಳ ತಂಡ ಅಂದಾಜಿಸಿದೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಭರಣಗಳ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಮಗು ದತ್ತು ಪಡೆದ ಪ್ರಕರಣ: ಸೋನುಗೌಡರನ್ನ ನಾಲ್ಕು ದಿನಗಳ ಕಸ್ಟಡಿಗೆ ಪಡೆದ ಪೊಲೀಸರು - ನಟಿ ಹೇಳಿದ್ದಿಷ್ಟು - violation of Hindu Adoption Act