ಕರ್ನಾಟಕ

karnataka

ETV Bharat / state

ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ಕಂಬಕ್ಕೆ ಕಟ್ಟಿ ಥಳಿಸಿದ ಆರೋಪ; 6 ಮಂದಿ ಸೆರೆ - Dalit Youth Assaulted - DALIT YOUTH ASSAULTED

ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಆರೋಪದಲ್ಲಿ ಬಾಗಲಕೋಟೆಯ ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಕಂಬಕ್ಕೆ ಕಟ್ಟಿ ಥಳಿತ ಆರೋಪ
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Sep 16, 2024, 11:50 AM IST

ಬಾಗಲಕೋಟೆ ಎಸ್​ಪಿ ಮಾಹಿತಿ (ETV Bharat)

ಬಾಗಲಕೋಟೆ:ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆಗೈದ ಆರೋಪದಡಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಉಗಲವಾಟ ಗ್ರಾಮದಲ್ಲಿ ದ್ಯಾಮವ್ವ ದೇವಿಯ ಗುಡಿ ಪ್ರವೇಶಿಸಿದ್ದಕ್ಕೆ ಜಾತಿ ನಿಂದಿಸಿ, ಕಂಬಕ್ಕೆ ಕಟ್ಟಿ ಥಳಿಸಿದರು ಎಂದು ಹಲ್ಲೆಗೊಳಗಾದ ಅರ್ಜುನ ಮಾದರ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಸೆಪ್ಟಂಬರ್ 10ರಂದು ವೈಯಕ್ತಿಕ ಕಾರಣಕ್ಕಾಗಿ ಜಗಳವಾಗಿತ್ತು. ಈ ವೇಳೆ ಕಂಬಕ್ಕೆ ಕಟ್ಟಿ ಹೊಡೆದರು. ಬಳಿಕ ಗ್ರಾಮದಲ್ಲಿ ಆಯಾ ಸಮುದಾಯದವರು ಅವರ ಸ್ಥಳದಲ್ಲೇ ಇರುವಂತೆ ನಿರ್ಬಂಧ ವಿಧಿಸಿ ಡಂಗೂರ ಸಾರಲಾಗಿತ್ತು. ಈ ಬಗ್ಗೆ ಗೊತ್ತಾದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದ ಬಳಿ ಹೋದಾಗ ಹಲ್ಲೆ ಮಾಡಿದ್ದಾರೆ ಎಂದು ಅರ್ಜುನ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಕೆರೂರ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡಬಾರದು. ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಎಸ್​ಪಿ ಅಮರನಾಥ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ: ಮೋಹನ್​ ಭಾಗವತ್​​ - Mohan Bhagwat On Untouchability

ABOUT THE AUTHOR

...view details