ಕರ್ನಾಟಕ

karnataka

ETV Bharat / state

ಮಗನ ಹುಟ್ಟುಹಬ್ಬ ಆಚರಿಸಿದ ದರ್ಶನ್​​​: ಮಧ್ಯಾಹ್ನ 2ಗಂಟೆಗೆ ಆಸ್ಪತ್ರೆಗೆ ದಾಖಲಾಗಲಿರುವ ನಟ

ಇಂದು ಮಧ್ಯಾಹ್ನ ಸುಮಾರು 2 ಗಂಟೆ ಹೊತ್ತಿಗೆ ನಟ ದರ್ಶನ್​ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.

actor will be admitted to the hospital at 2pm
ಮಧ್ಯಾಹ್ನ 2ಗಂಟೆಗೆ ಆಸ್ಪತ್ರೆಗೆ ದಾಖಲಾಗಲಿರುವ ದರ್ಶನ್​​ (ETV Bharat)

By ETV Bharat Karnataka Team

Published : 5 hours ago

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರ ಆರೋಗ್ಯ ತಪಾಸಣೆಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ. ಅವರ ಚಲನವಲನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2 ಗಂಟೆ ಹೊತ್ತಿಗೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.

ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ದರ್ಶನ್ ಮನೆ ಬಳಿ ಬಿಗಿ ಪೊಲೀಸ್​ ಭದ್ರತೆ ವಹಿಸಲಾಗಿದೆ. ರಾತ್ರಿಯಿಂದಲೇ ಮಗನ ಹುಟ್ಟುಹಬ್ಬದ ಖುಷಿಯಲ್ಲಿರುವ ದರ್ಶನ್ ಮಧ್ಯಾಹ್ನ 2ಗಂಟೆ ಸುಮಾರಿಗೆ ಆಸ್ಪತ್ರೆಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಬೆನ್ನು ನೋವಿನ ಹಿನ್ನೆಲೆಯಲ್ಲಿ ಸರ್ಜರಿಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಆಗಲಿದ್ದಾರೆ.

ಮಧ್ಯಾಹ್ನ 2ಗಂಟೆಗೆ ಆಸ್ಪತ್ರೆಗೆ ದಾಖಲಾಗಲಿರುವ ದರ್ಶನ್​​ (ETV Bharat)

ಇದನ್ನೂ ಓದಿ:ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ನಿವಾಸದ ಬಳಿ ಪೊಲೀಸ್ ಬಿಗಿ ಭದ್ರತೆ: 50ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ

ದರ್ಶನ್‌ ಅವರು ಜೈಲಿನಿಂದ ಹೊರಬಂದಿರುವ ಹಿನ್ನೆಲೆ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡೋ ಸಲುವಾಗಿ ಆರ್​ಆರ್‌ ನಗರದ ನಿವಾಸದ ಬಳಿ ಬಂದು ಸೇರುವ ಸಾಧ್ಯತೆ ಇದೆ. ಹಾಗಾಗಿ ಅವರ ಮನೆ ಬಳಿ ಪೊಲೀಸ್​​ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರಿತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಈ ಎಚ್ಚರಿಕೆ ವಹಿಸಲಾಗಿದೆ. ದರ್ಶನ್‌ ಮನೆ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ. 2 ಕೆಎಸ್‌ಆರ್‌ಪಿ ತುಕಡಿ, ಸ್ಥಳೀಯ ಪೊಲೀಸರು ಸೇರಿದಂತೆ 50ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ.

ಇದನ್ನೂ ಓದಿ:ನಾಗ ಚೈತನ್ಯ ಶೋಭಿತಾ ಧೂಳಿಪಾಲ ಮದುವೆಗೆ ಸಿದ್ಧತೆ: ದಿನಾಂಕ ಇಲ್ಲಿದೆ

ABOUT THE AUTHOR

...view details