ಕರ್ನಾಟಕ

karnataka

ETV Bharat / state

ಸೆ.17ರವರೆಗೆ ದರ್ಶನ್, ಇತರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ - Darshan Judicial Custody

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನ ಅವಧಿ ಮತ್ತೆ ಮುಂದೂಡಿಕೆಯಾಗಿದೆ. ಸೆ.17ರವರೆಗೆ ದರ್ಶನ್, ಇತರ ಆರೋಪಿಗಳ ನ್ಯಾಯಾಂಗ ಅವಧಿ ವಿಸ್ತರಣೆಯಾಗಿದೆ.

darshan
ಪವಿತ್ರಾಗೌಡ, ದರ್ಶನ್ (ETV Bharat)

By ETV Bharat Karnataka Team

Published : Sep 13, 2024, 3:39 PM IST

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳಿಗೆ ಸೆಪ್ಟೆಂಬರ್​​ 17ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು 24ನೇ ಎಸಿಎಂಎಂ ನ್ಯಾಯಾಲಯ ವಿಸ್ತರಿಸಿದೆ.

ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ, ದೀಪಕ್, ತುಮಕೂರು ಜೈಲಿನಿಂದ ಅನುಕುಮಾರ್, ಜಗದೀಶ್ ಹಾಗೂ ರವಿ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹದಲ್ಲಿರುವ 17 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದರು. ಹಾಜರಾಗುತ್ತಿದ್ದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸರತಿಯಂತೆ ಆರೋಪಿಗಳ ಹೆಸರು ಕೂಗಿ ಇರುವಿಕೆ ಬಗ್ಗೆ ಖಚಿತಪಡಿಸಿಕೊಂಡರು.

ಆರೋಪಿಗಳ ಪರ ವಕೀಲರು ವಾದ ಮಂಡಿಸಿ, ''ಸಂಪೂರ್ಣ ಚಾರ್ಜ್ ಶೀಟ್ ಒದಗಿಸಿಲ್ಲ. ಡಿಜಿಟಲ್ ಎವಿಡೆನ್ಸ್ ಸಹ ಪೊಲೀಸರು ನೀಡಿಲ್ಲ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿಂತೆ ಸಿಆರ್​​​ಪಿಸಿ 164 ಅಡಿ ಹೇಳಿಕೆ ನೀಡಿದ ಪ್ರಮಾಣೀಕೃತ ದಾಖಲಾತಿ ನೀಡಿಲ್ಲ'' ಎಂದು ಕೋರ್ಟ್ ಗಮನಕ್ಕೆ ತಂದರು. ಎಸ್​ಪಿಪಿ ಪರ ವಕೀಲ ಪ್ರಸನ್ನ ಕುಮಾರ್, ''ಮುಂದಿನ ವಾರ ಡಿಜಿಟಲ್ ಎವಿಡೆನ್ಸ್​ಗಳನ್ನು ಸಲ್ಲಿಸಲಾಗುವುದು'' ಎಂದು ಮಾಹಿತಿ ನೀಡಿದರು.

ಇದೇ ವೇಳೆ, ಟೆಕಿಕ್ನಲ್ ಎವಿಡೆನ್ಸ್ ನೀಡಿದ ಬಳಿಕ ಸೆಷನ್ಸ್ ಕೋರ್ಟ್​​ಗೆ ವರ್ಗಾಯಿಸುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿದರು. ಆಗ, ಸಾಕ್ಷ್ಯ ಸಲ್ಲಿಸಿದ ಬಳಿಕವೇ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗುವುದು ಎಂದು ಹೇಳಿದ ನ್ಯಾಯಾಧೀಶರು, ಸೆಪ್ಟೆಂಬರ್​​ 17ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶಿಸಿದರು.

ಇದನ್ನೂ ಓದಿ:ಬಳ್ಳಾರಿ ಜೈಲಿನಲ್ಲಿ ದರ್ಶನ್ ಭೇಟಿಯಾಗಿ ಚಾರ್ಜ್​​​ಶೀಟ್ ಬಗ್ಗೆ ಚರ್ಚಿಸಿದ ಪತ್ನಿ ವಿಜಯಲಕ್ಷ್ಮಿ, ವಕೀಲ - Vijayalakshmi Meets Darshan

ABOUT THE AUTHOR

...view details