ದಾವಣಗೆರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ (ETV Bharat) ದಾವಣಗೆರೆ:ಮುಡಾ ಪ್ರಕರಣದಲ್ಲಿಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ದಾವಣಗೆರೆಯ ಅಂಬೇಡ್ಕರ್ ಸರ್ಕಲ್‌ನಲ್ಲಿಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಪ್ರತಿಮೆ ಮುಂಭಾಗ ರಾಜ್ಯಪಾಲರ ಸಮಾಧಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಾಜ್ಯಪಾಲರ ಅಣಕು ಶವಯಾತ್ರೆ ನಡೆಸಿದರು.
ಬಿಜೆಪಿ ಕೈಗೊಂಬೆಯಾಗಿರುವ ರಾಜ್ಯಪಾಲರಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು, ತಕ್ಷಣ ತಮ್ಮ ನಡೆಯನ್ನು ಬದಲಿಸುವಂತೆ ಮನವಿ ಮಾಡಿದರು. ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಮಟೆ ಬಾರಿಸಿದರು. ಇದೇ ವೇಳೆ ರಾಜ್ಯಪಾಲರು ತೊಲಗಲಿ ಎಂದು ಘೋಷಣೆ ಕೂಗಿದರು.
ರಸ್ತೆ ಮಧ್ಯೆ ಕುಳಿತ ಶಾಮನೂರು: ರಸ್ತೆ ಮಧ್ಯೆ ಕುಳಿತ ಶಾಸಕ ಶಾಮನೂರು ಶಿವಶಂಕರಪ್ಪ ವಿನೂತನವಾಗಿ ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದರು. ಇದಕ್ಕೆ ಅವರ ಸೊಸೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕೂಡ ಸಾಥ್ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರಿಗೆ ಕನ್ನಡಕ ಕೊರಿಯರ್ ಮಾಡಿದರು. ರಾಜ್ಯಪಾಲರಿಗೆ ಸರಿಯಾಗಿ ಕಣ್ಣು ಕಾಣ್ತಿಲ್ಲ. ಅರಳು ಮರಳಾಗಿ ಆದೇಶ ಮಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - Congress Protest Against Governor