ಬೆಳಗಾವಿ: ಪ್ರಯಾಗ್ರಾಜ್ ಮಹಾಕುಂಭ ಮೇಳದಲ್ಲಿ ಇತ್ತೀಚಿಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿ ವಡಗಾವಿಯ ಜ್ಯೋತಿ ಹತ್ತರವಾಟ ಮತ್ತು ಅವರ ಪುತ್ರಿ ಮೇಘಾ ಅವರ ಮೃತದೇಹಗಳನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಳೆದ ರಾತ್ರಿ ಬರಮಾಡಿಕೊಂಡರು.
ಮಧ್ಯರಾತ್ರಿ ಆಗಮಿಸಿದ ತಾಯಿ-ಮಗಳ ಪಾರ್ಥಿವ ಶರೀರಗಳಿಗೆ ಜಿಲ್ಲಾಧಿಕಾರಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಶೇಷ ಜಿಲ್ಲಾಧಿಕಾರಿ ಹರ್ಷಾ ಶೆಟ್ಟಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಉಪಸ್ಥಿತರಿದ್ದು, ಗೌರವ ಸಲ್ಲಿಸಿದರು.