ಬೆಂಗಳೂರು: "ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಪ್ರಕರಣವನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಅಂದಿನ ಅಡ್ವೊಕೇಟ್ ಜನರಲ್ ಹೇಳಿದ್ದರು. ಅದರ ದಾಖಲೆಯನ್ನು ನಾನು ಮಾಹಿತಿ ಹಕ್ಕು ಮೂಲಕ ಪಡೆದಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದು ತಪ್ಪು. ಹೀಗಾಗಿ ನಮ್ಮ ಸರ್ಕಾರ ಅನುಮತಿ ಹಿಂಪಡೆದು ಲೋಕಾಯುಕ್ತಕ್ಕೆ ನೀಡಿದೆ" ಎಂದರು.
ಲೋಕಾಯುಕ್ತದಲ್ಲಿ ಎಫ್ಐಆರ್: 'ಕಾನೂನು ಹೋರಾಟ ಮುಂದುವರಿಸುವೆ'- ಡಿಕೆಶಿ
ನನ್ನ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು ಯಡಿಯೂರಪ್ಪನವರ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದು ತಪ್ಪು. ಹೀಗಾಗಿ ನಮ್ಮ ಸರ್ಕಾರ ಅನುಮತಿ ಹಿಂಪಡೆದು ಲೋಕಾಯುಕ್ತಕ್ಕೆ ನೀಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನನ್ನ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು, ಕಾನೂನು ಹೋರಾಟ ಮುಂದುವರಿಸುವೆ: ಡಿ.ಕೆ. ಶಿವಕುಮಾರ್
Published : Feb 13, 2024, 10:31 PM IST
ಅನುಮತಿ ಹಿಂಪಡೆದರೂ ನೋಟಿಸ್:"ಸರ್ಕಾರ ನನ್ನ ವಿರುದ್ಧದ ತನಿಖೆಯ ಅನುಮತಿ ಹಿಂಪಡೆದ ನಂತರವೂ ಸಿಬಿಐನವರು ನನ್ನ ಸಂಸ್ಥೆಗಳು ಹಾಗೂ ನನ್ನ ಜತೆ ವ್ಯವಹಾರ ಮಾಡಿರುವವರಿಗೆ ನೂರಾರು ನೋಟಿಸ್ ನೀಡುತ್ತಿದ್ದಾರೆ. ಯಾಕೆ ನೋಟಿಸ್ ನೀಡುತ್ತಿದ್ದಾರೋ ಗೊತ್ತಿಲ್ಲ" ಎಂದು ತಿಳಿಸಿದರು.
ಇದನ್ನೂ ಓದಿ:ಪೆರಿಫರೆಲ್ ರಿಂಗ್ ರೋಡ್ ಯೋಜನೆ ಎಕನಾಮಿಕ್ ಕಾರಿಡಾರ್ ಆಗಿ ಕಾರ್ಯರೂಪಕ್ಕೆ ತರುತ್ತೇವೆ: ಡಿ.ಕೆ. ಶಿವಕುಮಾರ್