ಕರ್ನಾಟಕ

karnataka

ETV Bharat / state

ಸಿಎಂ ಕುರ್ಚಿ ಖಾಲಿಯಿಲ್ಲ, ದೇಶಪಾಂಡೆ ಸಿಎಂ ಸ್ಥಾನಕ್ಕೆ ಆಸೆ ಪಡುವುದು ತಪ್ಪಲ್ಲ: ಡಿ.ಕೆ.ಶಿವಕುಮಾರ್ - D K Shivakumar - D K SHIVAKUMAR

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ಮುಖ್ಯಮಂತ್ರಿ ಆಗುವೆನೆಂದು ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ನೀಡಿರುವ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ಸಿಎಂ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಹಿರಿಯರಾದ ದೇಶಪಾಂಡೆ ಅವರಿಗೆ ಏನು ಗೌರವ ನೀಡಬೇಕೋ ಅದನ್ನು ನೀಡೋಣ ಎಂದಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : Sep 2, 2024, 3:57 PM IST

Updated : Sep 2, 2024, 7:01 PM IST

ಡಿಸಿಎಂ ಡಿ.ಕೆ. ಶಿವಕುಮಾರ್​ (ETV Bharat)

ಬೆಂಗಳೂರು: ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂಬ ಆರ್.ವಿ.ದೇಶಪಾಂಡೆ ಅವರ ಹೇಳಿಕೆ ಬಗ್ಗೆ ಮಾತನಾಡಿ, ಹಿರಿಯರಾದ ದೇಶಪಾಂಡೆ ಆಸೆ ಪಡುವುದು ತಪ್ಪಲ್ಲ. ಆದರೆ, ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಬೇಕೋ ಅದನ್ನು ನೀಡೋಣ ಎಂದರು.

ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ತೀರ್ಪು ಬಂದರೆ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಸಂಸದ ಡಾ. ಸುಧಾಕರ್ ಪ್ರಮಾಣ ಪತ್ರ ನೀಡಲಿ: ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎಂಬ ಹೇಳಿಕೆ ಬಗ್ಗೆ ಮಾತನಾಡಿ, ಕಾಂಗ್ರೆಸ್​ನಲ್ಲಿದ್ದು, ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್​ನಲ್ಲಿತ್ತು. ನಾಲ್ಕೈದು ವರ್ಷದಿಂದ ಬದಲಾಗಿದೆ. ನಾನು ಕೋವಿಡ್ ಹಗರಣದ ವರದಿಯನ್ನು ಓದಿಲ್ಲ. ಕೇವಲ ಮಾಧ್ಯಮಗಳ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದರು.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಶೀಘ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿರುವ ಬಗ್ಗೆ ಮಾತನಾಡಿ, ಇದರ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.

ಇದನ್ನೂ ಓದಿ:ಸಿಎಂ ಆಗುವ ಹಗಲು ಕನಸು ಕಾಣಬೇಡಿ: ಸಚಿವ ಎಂ.ಬಿ.ಪಾಟೀಲ್ ಟಾಂಗ್ - M B Patil

ಶಾಲಾ ಮಕ್ಕಳಿಂದ ಸ್ವಚ್ಛತೆ ಬಗ್ಗೆ ಅರಿವು: ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡು 100 ವರ್ಷಗಳು ಸಂದಿವೆ. ಇದಕ್ಕಾಗಿ ನಗರದಾದ್ಯಂತ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗುವುದು. ಇದೇ ವೇಳೆ ಒಂದು ಸಾವಿರ ಶಾಲಾ ಮಕ್ಕಳು ಆನ್ ಲೈನ್ ಮೂಲಕ ಪತಿಜ್ಞಾವಿಧಿ ತೆಗೆದುಕೊಳ್ಳಲಿದ್ದಾರೆ. ಮಕ್ಕಳಿಂದ ಕಸ ಎಸೆಯುವವರಿಗೆ ತಿಳಿಹೇಳಿಸುವ ಕೆಲಸ ಮಾಡಲಾಗುವುದು. ಅಕ್ಟೋಬರ್ 2 ರಂದು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

Last Updated : Sep 2, 2024, 7:01 PM IST

ABOUT THE AUTHOR

...view details