ಬೆಂಗಳೂರು : ಸಿ. ಪಿ ಯೋಗೇಶ್ವರ್ ನಡೆ - ನುಡಿ ಬಗ್ಗೆ ಮುಂದೆ ಕಾದು ನೋಡೋಣ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯತ್ವಕ್ಕೆ ಯೋಗೇಶ್ವರ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನಗೆ ಗೊತ್ತಿಲ್ಲ. ಮಾಧ್ಯಮ ಪ್ರತಿನಿಧಿಗಳ ಮಾತಿನ ಮೂಲಕ ತಿಳಿದಿದೆ. ಏನು ಅವರ ವಿಚಾರ?. ಮೊದಲಿನಿಂದ ಎಲೆಕ್ಷನ್ಗೆ ನಿಂತುಕೊಳ್ತೇನೆ ಅನ್ನುತ್ತಿದ್ರು. ಅದಕ್ಕೆ ರಾಜೀನಾಮೆ ಕೊಟ್ಟಿರಬೇಕು. ಅವರ ಮುಂದಿನ ನಡೆ, ನುಡಿ ಬಗ್ಗೆ ಮುಂದೆ ಕಾದು ನೋಡೋಣ ಎಂದು ಸೂಚ್ಯವಾಗಿ ತಿಳಿಸಿದರು.
ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು (ETV Bharat) ಕುಮಾರಸ್ವಾಮಿ ಅವರು ದೇವೇಗೌಡರ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆ ಬಗ್ಗೆ ಪ್ರತಿಕ್ರಿಯಿಸಿ, ಅವರ ಪಕ್ಷದ ಸಭೆ ಅವರು ಮಾಡುತ್ತಾರೆ. ಅವರ ಕ್ಷೇತ್ರದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಅವರ ಸಭೆ ತಪ್ಪು ಎಂದು ಹೇಳಲು ಸಾಧ್ಯವೇ?. ನಾವು ನಿನ್ನೆ ಸಿಎಂ ನಿವಾಸದಲ್ಲಿ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ಸಭೆ ಮಾಡಿದ್ದೇವೆ. ಅವರು ಅದೇ ರೀತಿ ಸಭೆ ಮಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ :ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ ಪಿ ಯೋಗೇಶ್ವರ್; ಸ್ವತಂತ್ರ ಸ್ಪರ್ಧೆಗೆ ಸೈನಿಕನ ಇಂಗಿತ