ಕರ್ನಾಟಕ

karnataka

ETV Bharat / state

ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿ ಕೆ ಶಿವಕುಮಾರ್ - DCM D K Shivakumar - DCM D K SHIVAKUMAR

ಪೆನ್​ಡ್ರೈವ್ ಪ್ರಕರಣದ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.

dcm-d-k-shivakumar
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

By ETV Bharat Karnataka Team

Published : May 9, 2024, 5:23 PM IST

ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

ಬೆಂಗಳೂರು : ''ಪೆನ್​ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು?. ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತ, ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸ್​ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದರು.

ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ ಎಂದು ಹೇಳಿದರು.

ಇದನ್ನೂ ಓದಿ :ಪೆನ್ ಡ್ರೈವ್ ಪ್ರಕರಣ: ಶಿಕ್ಷೆ ಕೊಡಿಸುವ ಬದಲು ಪ್ರಚಾರ ಮಾಡಲಾಗುತ್ತಿದೆ; ಕುಮಾರಸ್ವಾಮಿ ಕಿಡಿ - H D Kumaraswamy

ABOUT THE AUTHOR

...view details