ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿನಿಂದ 7 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಹ್ವಾನದ ಮೇರೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಅಲ್ಲಿಗೆ ಪ್ರಯಾಣಿಸಲಿದ್ದಾರೆ.
ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿಯಾಗಲಿದ್ದಾರೆ. ಸೆಪ್ಟೆಂಬರ್ 14ರಂದು ಅವರು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ. ತಮ್ಮ ವಿದೇಶ ಪ್ರವಾಸದ ಸಂಬಂಧ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ. ಇಂದು ರಾತ್ರಿ ಬೆಂಗಳೂರಿನಿಂದ ಅಮೆರಿಕಕ್ಕೆ ತೆರಳುವರು.
ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರ ಟ್ರಸ್ಟ್‌ವೊಂದರ ಜೊತೆ ಡಿ.ಕೆ.ಶಿವಕುಮಾರ್ ನಂಟು ಹೊಂದಿದ್ದಾರೆ. ಈ ಟ್ರಸ್ಟ್‌ಗೆ ಡಿ.ಕೆ.ಶಿವಕುಮಾರ್ ನೆರವು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಮೆರಿಕಗೆ ಬರುವಂತೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.
ಕಮಲಾ ಹ್ಯಾರಿಸ್ ಅವರು ಅಮೆರಿಕದಲ್ಲಿ ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತ ಸಂವಾದ ಕಾರ್ಯಕ್ರಮ ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಅವರೂ ಈ ಕಾರ್ಯಕ್ರಮಕ್ಕೆ ಆಹ್ವಾನಿತರಾಗಿದ್ದಾರೆ.
ಇದನ್ನೂ ಓದಿ:ಹೊರಗೆ ಸಿದ್ಧರಾಮಯ್ಯನವರ ಹಿಂದೆ ಕಲ್ಲು ಬಂಡೆ, ಒಳಗೆ ಸಿಎಂ ಕುರ್ಚಿಗೆ ಪೈಪೋಟಿ: ಜೋಶಿ ವ್ಯಂಗ್ಯ - Pralhad Joshi