ಕರ್ನಾಟಕ

karnataka

ETV Bharat / state

ನ್ಯೂಯಾರ್ಕ್​ನ "ದಿ ಎಡ್ಜ್" ಸ್ಕೈ ಡೆಕ್ ವೀಕ್ಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ - D K Shivakumar In America - D K SHIVAKUMAR IN AMERICA

ಕುಟುಂಬಸ್ಥರೊಂದಿಗೆ ಅಮೆರಿಕ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನ್ಯೂಯಾರ್ಕ್​ನಲ್ಲಿನ ಪ್ರಖ್ಯಾತ 'ದಿ ಎಡ್ಜ್' ಸ್ಕೈ ಡೆಕ್ ವೀಕ್ಷಣೆ ಮಾಡಿದರು.

D K Shivakumar
ದಿ ಎಡ್ಜ್ ಸ್ಕೈ ಡೆಕ್ ವೀಕ್ಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : Sep 15, 2024, 3:13 PM IST

ನ್ಯೂಯಾರ್ಕ್/ಬೆಂಗಳೂರು: ಪ್ರವಾಸಿಗರ ಆಕರ್ಷಣೆಗಾಗಿ ಬೆಂಗಳೂರಿನಲ್ಲಿ ಸ್ಕೈ ಡೆಕ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್ ನಗರದ ಹಡ್ಸನ್ ಯಾರ್ಡ್ಸ್ ನಲ್ಲಿರುವ "ದಿ ಎಡ್ಜ್" ಸ್ಕೈ ಡೆಕ್​ಗೆ ಭೇಟಿ ನೀಡಿದ್ದಾರೆ. ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತಿತರ ವಿಚಾರಗಳನ್ನು ಪರಿಶೀಲಿಸಿದರು.

ದಿ ಎಡ್ಜ್ ಸ್ಕೈ ಡೆಕ್ ವೀಕ್ಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಪತ್ನಿ ಉಷಾ ಅವರ ಜೊತೆ ಸ್ಕೈ ಡೆಕ್ ವೀಕ್ಷಿಸಿದ ಶಿವಕುಮಾರ್, ಅದರ ಮನೋಹರ ನೋಟವನ್ನು ಕಣ್ತುಂಬಿಕೊಂಡರು. ಹಡ್ಸನ್ ಯಾರ್ಡ್ಸ್ 30 ವೆಸ್ಟರ್ನ್ ಹೆಮಿಸ್ಫರ್​​ನಲ್ಲಿರುವ ಕಟ್ಟಡದ 100ನೇ ಮಹಡಿಯಲ್ಲಿ 7,500 ಚದರ್​ ಅಡಿಯ ಈ ಡೆಕ್ ಅನ್ನು ವೀಕ್ಷಣೆ ಮಾಡಿದರು. ಈ ಡೆಕ್ ಫ್ಲೋರ್​​ನಿಂದ ಹಿಡಿದು ಸೀಲಿಂಗ್​​ವರೆಗೂ ಪಾರದರ್ಶಕ ಗಾಜಿನಿಂದ ಕೂಡಿದೆ. ಇದು ನ್ಯೂಯಾರ್ಕ್ ನಗರದ ವಿಹಂಗಮ ನೋಟಕ್ಕೆ ವೇದಿಕೆಯಾಗಿದೆ.

ನ್ಯೂಯಾರ್ಕ್​ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರಿನ ಸ್ಕೈ ಡೆಕ್ ನಿರ್ಮಾಣ ವಿಚಾರವಾಗಿ ಶಿವಕುಮಾರ್ ಅವರು ಖ್ಯಾತ ವಾಸ್ತುಶಿಲ್ಪ ವಿನ್ಯಾಸಗಾರ ಡಾ. ಬಾಬು ಕೀಲಾರ ಅವರೊಂದಿಗೆ ಚರ್ಚಿಸಿದರು. ಈ ಪ್ರವಾಸದಲ್ಲಿ ಶಿವಕುಮಾರ್ ಅವರು ಕೀಲಾರ ಜೊತೆಗೂಡಿ ಹಡ್ಸನ್ ಯಾರ್ಡ್ ಸೇರಿದಂತೆ ಹಲವು ಸ್ಕೈ ಡೆಕ್ ಗಗನಚುಂಬಿ ಕಟ್ಟಡಗಳನ್ನು ವೀಕ್ಷಿಸಿದರು. ನ್ಯೂಯಾರ್ಕ್​ನ ವಿಶ್ವ ವಾಣಿಜ್ಯ ಕಟ್ಟಡ, ಚೀನಾದ ಶಾಂಘೈ ಟವರ್, ದುಬೈನ ಬುರ್ಜ್ ಖಲೀಫಾದ ವಿನ್ಯಾಸ ಮಾಡಿರುವ ಹೆಚ್ಓಕೆಯ ವಾಸ್ತುಶಿಲ್ಪ ವಿನ್ಯಾಸಗಾರ ಕೆನ್ನೆತ್ ಡ್ರಕರ್ ಅವರ ಜೊತೆಗೂ ಡಿಸಿಎಂ ಚರ್ಚೆ ನಡೆಸಿದರು.

ದಿ ಎಡ್ಜ್ ಸ್ಕೈ ಡೆಕ್ ವೀಕ್ಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಸುಸ್ಥಿರ ಆಲೋಚನೆಗಳನ್ನು ಒಟ್ಟುಗೂಡಿಸಿದರೆ ಬೆಂಗಳೂರಿನ ಸ್ಕೈ ಲೈನ್​ಗೆ ಹೊಸ ವ್ಯಾಖ್ಯಾನ ನೀಡುವುದರ ಜೊತೆಗೆ ನಗರಾಭಿವೃದ್ಧಿಯ ಗುಣಮಟ್ಟವನ್ನು ಹೆಚ್ಚಿಸಲಿದೆ' ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಿಎಂ ಅದ್ಧೂರಿ ಚಾಲನೆ: ಗಮನ ಸೆಳೆದ ಲೇಸರ್​​ ಶೋ - Gaganachukki Falls

ABOUT THE AUTHOR

...view details