ಕರ್ನಾಟಕ

karnataka

ETV Bharat / state

ಸಿ.ಟಿ.ರವಿ ಬಂಧನ: ಡಿಸಿಎಂ ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು? - CT RAVI ARREST CASE

ವಿಧಾನ ಪರಿಷತ್​ ಸದಸ್ಯ ಸಿ.ಟಿ.ರವಿ ಬಂಧನ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದರು.

CT RAVI ARREST CASE
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (ETV Bharat)

By ETV Bharat Karnataka Team

Published : 13 hours ago

ಬೆಳಗಾವಿ: "ಬಿಜೆಪಿ ಮತ್ತು ಅವರ ನಾಯಕರಿಗೆ ಮಾನ, ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ ವಾಗ್ದಾಳಿ ನಡೆಸಿದರು.

ಸುವರ್ಣ ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಅವರು ಕಟುವಾದ ಪದಗಳಲ್ಲಿ ಟೀಕಿಸಿದರು.

"ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲೂ ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ. ಶಾಸಕ ಮುನಿರತ್ನ ವಿಚಾರದಲ್ಲಿಯೂ ಬಿಜೆಪಿ ಹೀಗೇ ವರ್ತಿಸಿತು" ಎಂದರು.

ಸರ್ಕಾರ ಸಿ.ಟಿ.ರವಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗೆ, "ಕಾನೂನೇ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತದೆ, ಸರ್ಕಾರವಲ್ಲ" ಎಂದು ಹೇಳಿದರು.

ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, "ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಪ್ರಕರಣದಲ್ಲಿ ಸಿ.ಟಿ.ರವಿ ಬಂಧನ ವಿಷಯವನ್ನು ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯ ನೋಡಿಕೊಳ್ಳುತ್ತದೆ" ಎಂದರು.

"ಯಾರೇ ಶಾಸಕರು ತಪ್ಪು ಮಾಡಿದ್ದರೂ ಅದರ ಬಗ್ಗೆ ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಅಶ್ಲೀಲವಾಗಿ ಮಾತನಾಡಿದ್ದಾರೆ ಅಂತಾ ಈಗಾಗಲೇ ದೂರು ದಾಖಲಾಗಿದೆ. ಆಡಿಯೋ, ವಿಡಿಯೋ ಬಗ್ಗೆಯೂ ಪೊಲೀಸ್ ತನಿಖೆಯಿಂದ ಗೊತ್ತಾಗುತ್ತದೆ. ನಮ್ಮ ಕೈಯಲ್ಲಿ ಏನೂ ಇಲ್ಲ. ಇನ್ನೇನಿದ್ದರೂ ಕಾನೂನು ಕ್ರಮ ಮಾತ್ರ. ನ್ಯಾಯಾಲಯ ಇದೆ, ಪೊಲೀಸ್ ಇಲಾಖೆ ಇದೆ, ಇವರುಗಳು ಮಾತ್ರ ಈ ಪ್ರಕರಣವನ್ನು ಹ್ಯಾಂಡಲ್​ ಮಾಡುತ್ತಾರೆ" ಎಂದು ಹೇಳಿದರು.

"ಸುವರ್ಣ ವಿಧಾನಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನದಲ್ಲಿ ಭದ್ರತಾ ವೈಫಲ್ಯ ಆಗಿದೆ. ಇದರ ಬಗ್ಗೆ ಪೊಲೀಸರು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ" ಎಂದು ಇದೇ ವೇಳೆ ಜಾರಕಿಹೊಳಿ ತಿಳಿಸಿದರು.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ - MLC CT RAVI ARRESTED

ABOUT THE AUTHOR

...view details