ಕರ್ನಾಟಕ

karnataka

'ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ': ಸಚಿವರುಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ - visit flood affected areas

By ETV Bharat Karnataka Team

Published : Jul 28, 2024, 3:07 PM IST

ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್
ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆ ಹಾನಿ ಬಗ್ಗೆ ವರದಿಯಾಗುತ್ತಿದೆ.

ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ವಿನಂತಿಸಿಕೊಂಡಿದ್ದಾರೆ.

ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ನವೀಲುತೀರ್ಥ ಡ್ಯಾಂನಿಂದ ನೀರು‌ ಬಿಡುಗಡೆ: ಒಂದೆಡೆ ಮೊಸಳೆ ಮತ್ತೊಂದೆಡೆ ಪ್ರವಾಹ ಆತಂಕ - Navilutheertha Reservoir

ABOUT THE AUTHOR

...view details