ಕರ್ನಾಟಕ

karnataka

ETV Bharat / state

ಬೆಂಗಳೂರಿನ ಮಾಲ್, ಗೇಮ್ ಜೋನ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಡಿಸಿಎಂ ಸೂಚನೆ - DCM DK Shivakumar

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಬೆಂಗಳೂರಿನ ಮಾಲ್​, ಗೇಮ್ ಜೋನ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆ ನಡೆಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.

dcm-dk-shivakumar
ಡಿಸಿಎಂ ಡಿ. ಕೆ ಶಿವಕುಮಾರ್ (ETV Bharat)

By ETV Bharat Karnataka Team

Published : May 26, 2024, 10:57 PM IST

ಬೆಂಗಳೂರು :ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್​ಗಳು, ಗೇಮಿಂಗ್ ಜೋನ್​ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, "ಗುಜರಾತಿನ ರಾಜ್ ಕೋಟ್​ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿರುವ ಅಗ್ನಿ ಅವಘಡ ಅತ್ಯಂತ ಕಳವಳಕಾರಿಯಾಗಿದೆ. ಈ ದುರಂತ ಎಚ್ಚರಿಕೆ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ? ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು'' ಎಂದು ಆದೇಶ ನೀಡಿದ್ದಾರೆ.

ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ? ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್​ನಂತಹ ಯಾವುದೇ ದುರ್ಘಟನೆ ನಡೆಯಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ :ಸಿಎಂ ಸಿಟಿ ರೌಂಡ್ಸ್: ಮೈಸೂರು ರಸ್ತೆಯ ರಾಜಕಾಲುವೆಗಳ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ - CM City Rounds

ABOUT THE AUTHOR

...view details