ಕರ್ನಾಟಕ

karnataka

ETV Bharat / state

ಬೆಳಗಾವಿ ಅಧಿವೇಶನದ ನಂತರ ಪೌರಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ ಅಧಿವೇಶನದ ನಂತರ ಪೌರಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

DCM DK SHIVAKUMAR MET AND INTERACTED WITH CIVIC WORKERS PROTESTING AT FREEDOM PARK
ಫ್ರೀಡಂ ಪಾರ್ಕ್​ನಲ್ಲಿ ಧರಣಿನಿರತ ಪೌರ ಕಾರ್ಮಿಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಡಿಸಿಎಂ ಡಿಕೆಶಿ ನಡೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : Dec 3, 2024, 9:35 PM IST

ಬೆಂಗಳೂರು: "ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ಬೆಳಗಾವಿ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಐಪಿಡಿ ಸಾಲಪ್ಪ ವರದಿ ಜಾರಿ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಫ್ರೀಡಂ ಪಾರ್ಕ್​ನಲ್ಲಿ ಧರಣಿ ಮಾಡುತ್ತಿದ್ದ ಪೌರಕಾರ್ಮಿಕರನ್ನು ಭೇಟಿ ಮಾಡಿದ ಅವರು, ಮಾತುಕತೆ ನಡೆಸಿದರು.

ಪೌರ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿಕೆಶಿ (ETV Bharat)

"ಕಳೆದ 25 ವರ್ಷಗಳಿಂದ ಮಾತ್ರವಲ್ಲ, ಈ ಸಮಾಜ ಆರಂಭವಾದಾಗಿನಿಂದಲೂ ನೀವು ಈ ಕೆಲಸ ಮಾಡುತ್ತಾ ಸೇವೆ ಮಾಡುತ್ತಿದ್ದೀರಿ. ಕಳೆದ ಸರ್ಕಾರದ ಅವಧಿಯಲ್ಲಿ ನೀವು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಲಾಗಿತ್ತು. ಆಗ ನಿಮ್ಮ ಜೊತೆ ಚರ್ಚೆ ಮಾಡಲಾಗಿತ್ತು. ಈಗಲೂ ನೀವು ಹೋರಾಟ ಮಾಡುತ್ತಿದ್ದೀರಿ. ದೇಶದ ವಿವಿಧ ಭಾಗಗಳಲ್ಲಿ ವಿವಿಧ ವ್ಯವಸ್ಥೆಗಳಿವೆ. ಏನೇ ಮಾಡಿದರೂ ವ್ಯವಸ್ಥಿತವಾಗಿ ಮಾಡಬೇಕಿದೆ" ಎಂದರು.

"ಖಾಸಗಿಯವರೊಂದಿಗೆ ಗುತ್ತಿಗೆ ಆಧಾರದ ಮೇಲೆ ನೀವು ಕೆಲಸ ಮಾಡುತ್ತಿದ್ದೀರಿ. ನಿಮಗೆ ಎಲ್ಲಾ ರೀತಿಯಲ್ಲೂ ಸೂಕ್ತವಾಗುವಂತೆ ನೆರವು ನೀಡಬೇಕು. ಈ ವಿಚಾರವಾಗಿ ನಮ್ಮ ಸರ್ಕಾರ ಸಿಎಂಸಿ ಮಟ್ಟದಲ್ಲಿ ಕೆಲವು ಪರಿಹಾರ ತೆಗೆದುಕೊಂಡಿದೆ. ಅಧಿವೇಶನದ ಬಳಿಕ ನಿಮ್ಮಲ್ಲಿರುವ ಎಲ್ಲಾ ಗುಂಪುಗಳನ್ನು ಕರೆಸಿ ಚರ್ಚೆ ಮಾಡಿ ಕಾನೂನು ಚೌಕಟ್ಟಿನಲ್ಲಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪರಿಹಾರ ಕೈಗೊಳ್ಳುತ್ತೇವೆ" ಎಂದು ಡಿಕೆಶಿ ಆಶ್ವಾಸನೆ ನೀಡಿದರು.

ಇದನ್ನೂ ಓದಿ:ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿಯೇ ಜನಕಲ್ಯಾಣ ಸಮಾವೇಶ: ಡಿ.ಕೆ.ಶಿವಕುಮಾರ್

ABOUT THE AUTHOR

...view details