ಕರ್ನಾಟಕ

karnataka

ETV Bharat / state

ಚನ್ನಪಟ್ಟಣದ ಮತದಾರರು, ಪಕ್ಷ ಬಯಸಿದರೆ ಸ್ಪರ್ಧಿಸದೆ ವಿಧಿ ಇಲ್ಲ: ಡಿ.ಕೆ.ಶಿವಕುಮಾರ್ - D K Shivakumar

ಕ್ಷೇತ್ರದ ಮತದಾರರು ಮತ್ತು ಪಕ್ಷ ಬಯಸಿದರೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

CHANNAPATNA BY ELECTION
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : Jun 19, 2024, 3:30 PM IST

Updated : Jun 19, 2024, 5:00 PM IST

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ (ETV Bharat)

ಬೆಂಗಳೂರು: ಪಕ್ಷ ಹಾಗೂ ಮತದಾರರು ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಣಕ್ಕಿಳಿಯತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಪಕ್ಷ ಹಾಗೂ ಮತದಾರರು ನನ್ನ ಸ್ಪರ್ಧೆ ಬಯಸಿದರೆ ವಿಧಿಯೇ ಇಲ್ಲ ಎಂದರು.

ಚನ್ನಪಟ್ಟಣ ನನ್ನ ಹೃದಯವಿದ್ದಂತೆ. ನನಗೆ ರಾಜಕೀಯ ಜನ್ಮ ನೀಡಿದ ತಾಲೂಕು. ಸಾತನೂರಿನಿಂದ ನಾಲ್ಕು ಬಾರಿ ಗೆದ್ದಿದ್ದೇನೆ. ಚನ್ನಪಟ್ಟಣದ ಮತದಾರರು ನನ್ನ ಮೇಲೆ ಪ್ರೀತಿ, ವಿಶ್ವಾಸ, ನಂಬಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಕನಕಪುರದಂತೆ ಚನ್ನಪಟ್ಟಣವನ್ನು ಅಭಿವೃದ್ಧಿ ಮಾಡಬೇಕು. ಜನರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಕೊಟ್ಟಿದ್ದಾರೆ. ಇಲ್ಲಿನ ಜನ ಒಳ್ಳೆಯವರು. ಅವರಿಗೆ ನನ್ನ ಮೇಲೆ ಪ್ರೀತಿ ಇದೆ ಎಂದರು.

ಚನ್ನಪಟ್ಟಣದ ಮತದಾರರು ಲೋಕಸಭಾ ಚುನಾವಣೆಯಲ್ಲಿ ನಮಗೆ ಹೆಚ್ಚು ಮತ ಹಾಕಿರುವುದರಿಂದ ಇಂದು ಚನ್ನಪಟ್ಟಣದ ಹಲವು ದೇವಾಲಯಗಳಿಗೆ ಭೇಟಿ ನೀಡಿ ಶಕ್ತಿ ಕೊಟ್ಟ ದೇವರುಗಳಿಗೆ ಹಾಗೂ ಮತದಾರರಿಗೆ ಕೃತಜ್ಞತೆ ಹೇಳುತ್ತೇನೆ. ಹಾಗೆಯೇ ದೇವಾಲಯಗಳ ಭೇಟಿಯ ಸಂದರ್ಭದಲ್ಲಿ ಮತದಾರರು, ನಾಯಕರ ಜೊತೆಯೂ ಮಾತನಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಚನ್ನಪಟ್ಟಣ ಉಪಸಮರಕ್ಕೆ ಸಜ್ಜು; ಕುತೂಹಲ ಮೂಡಿಸಿದ ಡಿಸಿಎಂ ಡಿಕೆಶಿ ದಿನಪೂರ್ತಿ ಟೆಂಪಲ್ ರನ್ - DK Shivakumar Temple Run

Last Updated : Jun 19, 2024, 5:00 PM IST

ABOUT THE AUTHOR

...view details