ಕರ್ನಾಟಕ

karnataka

ETV Bharat / state

ವಿಧಾನಸಭೆ ಚುನಾವಣೆಯಂತೆ ಎಕ್ಸಿಟ್ ಪೋಲ್ ಸುಳ್ಳಾಗಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ - D K Shivakumar - D K SHIVAKUMAR

ವಿಧಾನಸಭೆ ಚುನಾವಣೆಯ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್‌ಗಳು ಸುಳ್ಳಾಗಲಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

DCM DK Shivakumar  Exit polls  Bengaluru
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : Jun 2, 2024, 6:28 PM IST

ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

ಬೆಂಗಳೂರು:''ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.

ಸದಾಶಿವ ನಗರದ ನಿವಾಸದ ಬಳಿ ಇಂದು ಮಾತನಾಡಿದ ಅವರು, ''ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು'' ಎಂದರು.

''ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ'' ಎಂದು ತಿಳಿಸಿದರು.

''ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ 80ರಿಂದ 85 ಸ್ಥಾನ ಮಾತ್ರ ಕೊಟ್ಟಿದ್ದರು. 136 ಸ್ಥಾನ ಗೆಲ್ಲುತ್ತೇವೆ ಎಂದು ನನ್ನ ರಾಜಕೀಯ ಅನುಭವದ ಮೇಲೆ ಹೇಳಿದ್ದೆ. ನಾನು ನಡೆಸಿದ್ದ ಖಾಸಗಿ ಸಮೀಕ್ಷೆಯ ಪ್ರಕಾರ ಜನ ನಮಗೆ 136 ಸ್ಥಾನ ನೀಡಿದರು'' ಎಂದು ಹೇಳಿದರು.

''ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ನಂಬಿಕೆ ಬಂದಿದೆ. ಇವು ನಮ್ಮ ಕೈ ಹಿಡಿಯಲಿವೆ. ಮೊದಲ ಹಂತದ ಚುನಾವಣೆಗಿಂತ ಎರಡನೇ ಹಂತದ ಚುನಾವಣೆಯಲ್ಲಿ ಎಐಸಿಸಿ ನೀಡಿದ ಗ್ಯಾರಂಟಿಗಳ ಜನರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿವೆ. ಗ್ಯಾರಂಟಿಗಳು ದೇಶದ ಜನರ ಮನಸ್ಸು ಗೆದ್ದಿವೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

''ಕಾಂಗ್ರೆಸ್ ಅಭಿವೃದ್ಧಿ ವಿಚಾರಗಳ ಮೇಲೆ ಹಾಗೂ ಬಿಜೆಪಿಯವರು ಭಾವನಾತ್ಮಕ ವಿಚಾರಗಳ ಮೇಲೆ ರಾಜಕೀಯ ಮಾಡುತ್ತಾರೆ. ದೇಶದ ವಿಚಾರ ಹೇಳುವುದಿಲ್ಲ, ಕರ್ನಾಟಕದಲ್ಲಿ ಎರಡಂಕಿ ದಾಟುತ್ತೇವೆ ಎನ್ನುವ ಆತ್ಮ ವಿಶ್ವಾಸವಿದೆ'' ಎಂದರು.

ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ಶೆಟ್ಟರ್ ಸ್ಥಾನ ತೆರವು, ಯತೀಂದ್ರ ಸೇರಿ 8 'ಕೈ' ಅಭ್ಯರ್ಥಿಗಳ ಹೆಸರು ಪ್ರಕಟ - Council Election

ABOUT THE AUTHOR

...view details