ಕರ್ನಾಟಕ

karnataka

ETV Bharat / state

ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಮತ್ತಷ್ಟು ಅಭ್ಯರ್ಥಿಗಳ ಹೆಸರು ಅಂತಿಮ: ಡಿಸಿಎಂ ಡಿ.ಕೆ ಶಿವಕುಮಾರ್ - Congress Candidates

ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದ್ದಾರೆ.

DCM DK Shivakumar
ಡಿಸಿಎಂ ಡಿ.ಕೆ ಶಿವಕುಮಾರ್

By ETV Bharat Karnataka Team

Published : Mar 9, 2024, 7:14 AM IST

Updated : Mar 9, 2024, 10:07 AM IST

ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ''ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಶುಕ್ರವಾರದ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. ಮಾರ್ಚ್​ 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ನಂತರ ಆ ಹೆಸರುಗಳು ಅಂತಿಮ ಆಗಲಿದೆ'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶುಕ್ರವಾರದಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಉಪಮುಖ್ಯಮಂತ್ರಿ, ''ಸ್ಥಳೀಯ ಶಾಸಕರು, ಮುಖಂಡರ ಜೊತೆ ಚರ್ಚೆ ನಡೆಸಿದಾಗ ಅವರು ಯಾರ ಹೆಸರನ್ನು ಪ್ರಸ್ತಾಪ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ನಾವು ಅಭ್ಯರ್ಥಿಗಳ ಆಯ್ಕೆ ಮಾಡಿದ್ದೇವೆ. ಇದೇ 11ರಂದು ನಡೆಯಲಿರುವ ಸಭೆ ನಂತರ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು'' ಎಂದರು.

''ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ಕೇವಲ ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಚರ್ಚೆ ಮಾಡುತ್ತಾರೆ. ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದ್ದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನಿಸುತ್ತಾರೆ ಎಂದ ಡಿ.ಕೆ. ಶಿವಕುಮಾರ್​​, ಸದ್ಯ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಷ್ಟರಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ, ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ರಾಜ್ಯದ ಏಳು ಅಭ್ಯರ್ಥಿಗಳ ಹೆಸರು ಘೋಷಣೆ

ಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 8 (ಶುಕ್ರವಾರ) ರಂದು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಗುರುವಾರದಂದು ಸಿಇಸಿ ಸಭೆ ನಡೆದಿತ್ತು. ಸಭೆಯಲ್ಲಿ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಫೈನಲ್​ ಮಾಡಲಾಗಿತ್ತು. ನಿನ್ನೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟ ಮಾಡಿದ್ದಾರೆ. ರಾಹುಲ್ ಗಾಂಧಿ ಸೇರಿ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಿದೆ. ಛತ್ತೀಸ್​ಗಢದ 6, ಕರ್ನಾಟಕ - 7, ಕೇರಳ - 16, ಲಕ್ಷದ್ವೀಪ - 1, ಮೇಘಾಲಯ - 2 , ನಾಗಾಲ್ಯಾಂಡ್​ - 1, ಸಿಕ್ಕಿಂ - 1, ತೆಲಂಗಾಣ - 4 ಹಾಗೂ ತ್ರಿಪುರದ 1 ಕ್ಷೇತ್ರಕ್ಕೆ ​ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಇದನ್ನೂ ಓದಿ:ಲೋಕ ಸಮರಕ್ಕೆ ಕಾಂಗ್ರೆಸ್​ ಮೊದಲ ಪಟ್ಟಿ ಬಿಡುಗಡೆ: ರಾಹುಲ್ ಗಾಂಧಿ ಸೇರಿ 39 ಅಭ್ಯರ್ಥಿಗಳ ಹೆಸರು ಪ್ರಕಟ

Last Updated : Mar 9, 2024, 10:07 AM IST

ABOUT THE AUTHOR

...view details