ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಚರ್ಚಿಸಿ ತೀರ್ಮಾನ: ಸಚಿವ ಎಂ‌.ಬಿ.ಪಾಟೀಲ್ - 2nd Airport In Bengaluru

ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

MB patil
ಸಚಿವ ಎಂ‌.ಬಿ.ಪಾಟೀಲ್ (IANS)

By ETV Bharat Karnataka Team

Published : Jul 7, 2024, 8:01 PM IST

ಬೆಂಗಳೂರು: ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯ. ಇದನ್ನು ಎಲ್ಲಿ‌ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿಗಳ ಜೊತೆ ವಿಚಾರ ವಿನಿಮಯ ನಡೆಸಿ ತೀರ್ಮಾನಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಎರಡನೇ ಏರ್ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ 2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನೂ ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು.

ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣ ಬರಬೇಕು ಎಂದಾದರೆ ಡಾಬಸಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಮುಂಬೈ ನಗರದಲ್ಲಿ ಎರಡು ವಿಮಾನ ನಿಲ್ದಾಣಗಳ ನಡುವೆ ಕೇವಲ 36 ಕಿ.ಮೀ. ಅಂತರವಿದೆ. ನ್ಯೂಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ಕೂಡ ಹೆಚ್ಚು ದೂರವಿಲ್ಲ. ಜೊತೆಗೆ, ಬಿಐಎಎಲ್ ಹೊಂದಿರುವ ಷರತ್ತು ತಮಿಳುನಾಡಿಗೂ ಅನ್ವಯಿಸುತ್ತದೋ, ಇಲ್ಲವೋ ಎಂಬುದನ್ನು ಪರಿಶೀಲಿಸಬೇಕು. ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಮೇಲೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಏರ್ಪೋರ್ಟ್ ಕಟ್ಟುವುದಾಗಿ ಹೇಳುತ್ತಿದೆ. ಇದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಚನ್ನಪಟ್ಟಣ ಉಪ ಚುನಾವಣೆ: ಯೋಗೇಶ್ವರ್​ ಜೊತೆ ಚರ್ಚಿಸಲು ಮುಖಂಡರಿಗೆ ಹೆಚ್​ಡಿಕೆ ಸೂಚನೆ - Kumaraswamy Meeting

ABOUT THE AUTHOR

...view details