ಕರ್ನಾಟಕ

karnataka

ETV Bharat / state

ವೈದ್ಯರ ಸುರಕ್ಷತಾ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸಲು ತೀರ್ಮಾನ: ಸಚಿವ ದಿನೇಶ್ ಗುಂಡೂರಾವ್ - Doctors Safety Measures - DOCTORS SAFETY MEASURES

ಇತ್ತೀಚೆಗೆ ಕೋಲ್ಕತ್ತಾದ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ರಾಜ್ಯದಲ್ಲೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಮುಂದಾಗಿದ್ದು, ವೈದ್ಯರ ಸುರಕ್ಷತೆಗೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸಲು ತೀರ್ಮಾನಿಸಲಾಗಿದೆ‌ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

MEETING ON DOCTORS SAFETY MEASURES
ಸಚಿವ ದಿನೇಶ್ ಗುಂಡೂರಾವ್ (ETV Bharat)

By ETV Bharat Karnataka Team

Published : Aug 20, 2024, 7:26 PM IST

ಬೆಂಗಳೂರು: ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೋಲ್ಕತ್ತಾದ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣ ಸಂಬಂಧ ರಾಜ್ಯದಲ್ಲೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಮುಂದಾದ ಆರೋಗ್ಯ ಇಲಾಖೆ, ವಿಧಾನಸೌಧದಲ್ಲಿ ಅಧಿಕಾರಿಗಳು, ವಿವಿಧ ವೈದ್ಯ ಸಂಘಟನೆಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಕರ್ತವ್ಯನಿರತ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ಭದ್ರತೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ‌‌.

ಸಭೆಯಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸಿ ಎಲ್ಲಾ ವಿಷಯಗಳನ್ನು ಕ್ರೋಢಿಕರಿಸಿ ವರದಿ ನೀಡಲು ತೀರ್ಮಾನಿಸಿದ್ದೇವೆ. ಈ ಕಾರ್ಯಪಡೆ ವೈದ್ಯರ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ, ಕಾನೂನುಗಳ ಅನುಷ್ಠಾನ ಸೇರಿ ಎಲ್ಲಾ ಆಯಾನಗಳಲ್ಲಿ ವೈದ್ಯರ ಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ಕೋಲ್ಕತ್ತಾ ಘಟನೆ ದೇಶದ ಗಮನ ಸೆಳೆದಿದೆ. ಘಟನೆ ಇಡೀ ದೇಶದಲ್ಲಿನ ಅಭದ್ರತೆ, ಮಹಿಳೆಯರ ಬಗ್ಗೆ ರಕ್ಷಣೆ ಬಗ್ಗೆ ಜಾಗೃತಿ ಮೂಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ 50% ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಅವರು ಭಯದ ವಾತಾವಾರಣದಲ್ಲಿ ಕೆಲಸ ಮಾಡುವುದು ಕಷ್ಟ. ಈ ನಿಟ್ಟಿನಲ್ಲಿ ಇಂದು ಸಭೆ ನಡೆಸಿದ್ದೇವೆ. 10-12 ವಿವಿಧ ಸಂಘಟನೆಗಳು ಸಭೆಯಲ್ಲಿ ಭಾಗವಹಿಸಿವೆ. ಭದ್ರತೆ ಹೆಚ್ಚಿಸುವ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಕ್ರಮಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

ವೈದ್ಯರ ರಕ್ಷಣೆಗೆ ಅನೇಕ ಕಾನೂನುಗಳು ಇವೆ. ವೈದ್ಯರಿಗೆ ಹಲ್ಲೆ ಮಾಡುವವರಿಗೆ 3-7 ವರ್ಷಗಳವರೆಗೆ ಶಿಕ್ಷೆ ವಿಧಿಸುವ ತಿದ್ದುಪಡಿ ತರಲಾಗಿದೆ. ಪ್ರಸ್ತುತ ಇದ್ದ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಈ ಬಗ್ಗೆ ನಿನ್ನೆ ಅಧಿಸೂಚನೆ ಹೊರಡಿಸಲಾಗಿದೆ. ಜನರಿಗೆ ಈ ಕಾನೂನು ಬಗ್ಗೆ ಮಾಹಿತಿ ಕೊಡುವ ಬಗ್ಗೆ ವೈದ್ಯರು ಸಲಹೆ ನೀಡಿದ್ದಾರೆ. ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ, ರಿಸ್ಟ್ ಬ್ಯಾಂಡ್, ಪ್ಯಾನಿಕ್ ಬಟನ್, ಪೊಲೀಸ್ ಇಲಾಖೆ ಜೊತೆ ಸಂಪರ್ಕಿಸಿ ಆವಾಗ ಆವಾಗ ಭೇಟಿ ನೀಡಿ ಪರೀಶೀಲನೆ, ಕೇಸ್​ಗಳ ಇತ್ಯರ್ಥವನ್ನು ಫಾಸ್ಟ್ ಟ್ಯ್ರಾಕ್ ಮಾಡುವ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ ಎಂದರು.

ಈ ಎಲ್ಲಾ ಸಲಹೆ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ವೈದ್ಯರ ಸುರಕ್ಷತೆಗೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸಲು ತೀರ್ಮಾನಿಸಲಾಗಿದೆ‌. ಆ ವರದಿ ಆಧಾರದಲ್ಲಿ ಮುಂದಿನ ಕ್ರಮ ವಹಿಸಲಾಗುವುದು. ಸಮಿತಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ವಿವಿಧ ವೈದ್ಯರ ಸಂಘಟನೆಗಳು ಭಾಗವಾಗಿರಲಿದ್ದಾರೆ ಎಂದರು.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಶಾಲೆಯ ಅಟೆಂಡರ್​ ಬಂಧನ, ರೈಲು ತಡೆದು ಜನಾಕ್ರೋಶ - Nursery Girls Sexual Abuse Case

ABOUT THE AUTHOR

...view details